



ಕುಕ್ಕೇಡಿ: ಗ್ರಾಮ ಪಂಚಾಯತಿನ 2025- 26ನೇ ಸಾಲಿನ ಮೊದಲ ಗ್ರಾಮ ಸಭೆಯು ನ. 18ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಕುಸುಮ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸಭೆಯನ್ನು ಮುನ್ನಡೆಸಿದರು. ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.

ಪಂಚಾಯತ್ ಅಭಿವೃದ್ಧಿ ಸುಧಾಕರ ಡಿ. ಸ್ವಾಗತಿಸಿದರು. ಕಾರ್ಯದರ್ಶಿ ಕುಂಜ್ಞ ಅನುಪಾಲನಾ ವರದಿ ಮತ್ತು ಲೆಕ್ಕ ಪತ್ರ ವಾಚಿಸಿದರು. ಸಿಬ್ಬಂದಿ ವರ್ಗದವರು ಸಹಕರಿಸಿದರು. ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.








