Site icon Suddi Belthangady

ಮುಂಡಾಜೆ: ಪದವಿ ಪೂರ್ವ ಕಾಲೇಜಿನಲ್ಲಿ ಮಾಹಿತಿ ಕಾರ್ಯಕ್ರಮ

ಮುಂಡಾಜೆ: ಸ್ವದೇಶಿ ಜಾಗೃತಿ “ಭಾರತೀಯರಾದ ನಾವು ಸ್ವದೇಶಿ ವಿಚಾರಧಾರೆಗಳನ್ನು ಅಳವಡಿಸಿಕೊಂಡು ಸ್ವದೇಶಿ ವಸ್ತುಗಳ ಬಳಕೆಯನ್ನು ಮಾಡುವುದರಿಂದ ಆತ್ಮ ನಿರ್ಭರ ಭಾರತದ ನಿರ್ಮಾಣ ಸಾಧ್ಯ” ಎಂದು ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಸುಭಾಷ್ ಚಂದ್ರ ಜೈನ್ ಅವರು ಅಭಿಪ್ರಾಯಪಟ್ಟರು. ಅವರು ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ ರೇಂಜರ್ಸ್ ಘಟಕದಿಂದ ನಡೆಸಲ್ಪಟ್ಟ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಗೀತಾ ಮಾತನಾಡಿ ಸ್ವದೇಶಿ ವಸ್ತುಗಳ ಬಳಕೆಯ ಮಹತ್ವವನ್ನು ತಿಳಿಸಿದರು. ವೇದಿಕೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮಾಧಿಕಾರಿ ನಮಿತಾ ಕೆ.ಆರ್., ರೇಂಜರ್ ಲೀಡರ್ ವಸಂತಿ, ರೋವರ್ ಸ್ಕೌಟ್ ಲೀಡರ್ ಶ್ರೀ ಕೃಷ್ಣ ಕಿರಣ್ ಉಪಸ್ಥಿತರಿದ್ದರು. ನಳಿನಿ ಸ್ವಾಗತಿಸಿ, ಶ್ರಾವ್ಯ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು. ಗಿರೀಶ್ ಧನ್ಯವಾದಗೈದರು.

Exit mobile version