ನ. 26: ಮಲೆಬೆಟ್ಟು ಶ್ರೀ ಮಹಾಗಣಪತಿ, ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಷಷ್ಠಿ ವಿಶೇಷ ಪೂಜೆ

0

ಉಜಿರೆ: ಮಲೆಬೆಟ್ಟು ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ನ. 26ರಂದು ಬೆಳಿಗ್ಗೆ ಗಂಟೆ 8-00ರಿಂದ ಮಧ್ಯಾಹ್ನ ಗಂಟೆ 12-00ರ ವರೆಗೆ ಮಲೆಬೆಟ್ಟು ಉದ್ಭವ ಶ್ರೀ ಸುಬ್ರಹ್ಮಣೇಶ್ವರ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯ ಷಷ್ಠಿ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳು ಉಜಿರೆಯ ಯು. ಶರತ್ ಕೃಷ್ಣ ಪಡುವೆಟ್ನಾಯರ ಮಾರ್ಗದರ್ಶನದಲ್ಲಿ ವಿವಿಧ ವೈದಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿರುವುದು.

ಬೆಳಿಗ್ಗೆ ಗಂಟೆ 9-00ಕ್ಕೆ ಶ್ರೀ ಮಹಾಗಣಪತಿ ದೇವರಿಗೆ ಅಭಿಷೇಕ, ಮಂಗಳಾರತಿ, ಬೆಳಿಗ್ಗೆ ಗಂಟೆ 10-00ಕ್ಕೆ ಶ್ರೀ ಸುಬ್ರಹ್ಮಣೇಶ್ವರ ದೇವರಿಗೆ ಕ್ಷೀರಾಭಿಷೇಕ, ಸೀಯಾಳಾಭಿಷೇಕ, ಪಂಚಾಮೃತ ಅಭಿಷೇಕ, ಪವಮಾನ ಕಲಶಾಭಿಷೇಕ, ಮಧ್ಯಾಹ್ನ ಗಂಟೆ 12-00ಕ್ಕೆ ಶ್ರೀ ಸುಬ್ರಹ್ಮಣೇಶ್ವರ ದೇವರಿಗೆ ಕಾರ್ತಿಕ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ,,ಮಧ್ಯಾಹ್ನ ಗಂಟೆ 12-30ಕ್ಕೆ ಶ್ರೀ ಮಹಾಗಣಪತಿ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

LEAVE A REPLY

Please enter your comment!
Please enter your name here