



ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಜಿಲ್ಲಾ ಮಟ್ಟದ ನೈತಿಕ ಮೌಲ್ಯಾಧಾರಿತ ಸ್ಪರ್ಧೆಗಳನ್ನು ಶಾಲಾ ವಿದ್ಯಾರ್ಥಿಗಳಿಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯಲ್ಲಿ ನ.18ರಂದು ನಡೆಸಲಾಯಿತು. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ, ಪ್ರಾಥಮಿಕ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ 6ನೇ ತರಗತಿ ವಿದ್ಯಾರ್ಥಿನಿ ಸಾನಿಧ್ಯ ತೃತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಸ್ಪರ್ಧೆಯಲ್ಲಿ ಭಾಗವಹಿಸಿದ ಹಾಗೂ ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಶುಭಹಾರೈಸಿದರು.









