Site icon Suddi Belthangady

ಸ್ಕೂಟರ್-ಕಾರು ಅಪಘಾತ: ಸವಾರೆ ಸಾವು, ಸಹ ಸವಾರೆಗೆ ಗಂಭೀರ ಗಾಯ

ಬೆಳ್ತಂಗಡಿ: ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರೆ ಓರ್ವರು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಎಂಬಲ್ಲಿ ನ. 19ರಂದು ಮಧ್ಯಾಹ್ನ ಸಂಭವಿಸಿದೆ.

ಸ್ಕೂಟರ್ ಸವಾರೆ ಕಡಬ ನಿವಾಸಿ ಸುನಿಲ್ ಎಂಬವರ ಪುತ್ರಿ ಅನನ್ಯಾ (21ವ) ಮೃತಪಟ್ಟವರು. ಸ್ಕೂಟರ್ ನ ಇನ್ನೋರ್ವ ಸವಾರೆ ಗುರುವಾಯನಕೆರೆ ನಿವಾಸಿ ಪೃಥ್ವಿ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಇಬ್ಬರೂ ಮಂಗಳೂರು ಕಾಲೇಜಿನ ಇಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿನಿಯರೆಂದು ತಿಳಿದು ಬಂದಿದೆ.

ಬಂಟ್ವಾಳ- ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾವಳಕಟ್ಟೆಯಿಂದ ಎನ್.ಸಿ.ರೋಡ್ ಗೆ ಸಾಗುವ ದಾರಿಯಲ್ಲಿ ತಿರುವೊಂದಿದ್ದು, ತೀರಾ ಅಪಾಯಕಾರಿಯಾಗಿದ್ದು ಅನೇಕ ಅಪಘಾತಗಳು ಸಂಭವಿಸಿವೆ. ಇಬ್ಬರೂ ಬೆಳ್ತಂಗಡಿಯಿಂದ ಕಾಲೇಜಿಗೆ ಹೋಗುವ ವೇಳೆ ಈ ತಿರುವಿನಲ್ಲಿ ವ್ಯಾಗನಾರ್ ಕಾರು ಮತ್ತು ಹೊಂಡಾ ಆಕ್ಟಿವ್ ಮಧ್ಯೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Exit mobile version