ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಮತ್ತು ಕಾಲೇಜಿನಲ್ಲಿ ನ. 15ರಂದು ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ನಡೆಯಿತು. ಕಾರ್ಯಕ್ರಮವನ್ನು ಜೈನ್ ಕಾಲೇಜಿನ ಉಪನ್ಯಾಸಕ ಮಹಾವೀರ ಜೈನ್ ಅವರು ಉದ್ಘಾಟಿಸಿ, “ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುವತ್ತ ಈ ವಿದ್ಯಾಸಂಸ್ಥೆ ಸದಾ ಮುಂದಾಗಿದೆ” ಎಂದು ಶ್ಲಾಘಿಸಿದರು.
ಬೆಳ್ತಂಗಡಿ ತಾಲೂಕಿನ ಶಿಕ್ಷಣಾಧಿಕಾರಿ ತಾರಾ ಕೇಸರಿ ಅವರು ಹಾಗೂ ನಿಟ್ಟಡೆ ಕ್ಲಸ್ಟರ್ CRP ಆಗಿರುವ ಆರತಿ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಅದೇ ರೀತಿ ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷ ಮಲ್ಲಿಕಾ ಕಾಶಿನಾಥ್ ಅವರು, “ಸಂಸ್ಥೆಯು ಶಿಸ್ತಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಉತ್ತಮ ಮಟ್ಟಕ್ಕೆ ಬೆಳೆಯುತ್ತಿದೆ” ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಶಾಲಾ ಸಂಸ್ಥಾಪಕ ಗಿರೀಶ್ ಕೆ.ಹೆಚ್. ಈ ಕಾರ್ಯಕ್ರಮವು ಪೋಷಕರ, ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಪರಿಶ್ರಮದಿಂದ ತಿಳಿಸಿದರು.
ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ಕೆ., ಶಿಕ್ಷಕ–ರಕ್ಷಕ ಸಂಘದ ಅಧ್ಯಕ್ಷ ಚಂದ್ರಶೇಖರ್, ಕಾಲೇಜಿನ ಶಿಕ್ಷಕ–ರಕ್ಷಕ ಸಂಘದ ಅಧ್ಯಕ್ಷ ಗೋಪಾಲ ಶೆಟ್ಟಿ ಅವರು ಕಾರ್ಯಕ್ರಮಕ್ಕೆ ಶುಭಾಶಯ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷರಾಗಿದ್ದ ಶಾಲಾ ಸಂಚಾಲಕ ಅಶ್ವಿತ್ ಕುಲಾಲ್ ಅವರು, “ಸಂಸ್ಥಾಪಕರ ಮಾರ್ಗದರ್ಶನ ಮತ್ತು ಪೋಷಕರ ಬೆಂಬಲದಿಂದ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಸಾಧ್ಯವಾಯಿತು” ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಕುಂಭಶ್ರೀ ವೈಭವ ಸಮಿತಿಯ ಪ್ರಧಾನ ಅಧ್ಯಕ್ಷ ಹರೀಶ್ ಪೊಕ್ಕಿ, ಸಮಿತಿಯ ಅಧ್ಯಕ್ಷ ಅಶ್ವಿತ್ ಕುಲಾಲ್, ಶಿಕ್ಷಕ–ರಕ್ಷಕ ಸಂಘದ ಉಪಾಧ್ಯಕ್ಷ ವಸಂತ್ ಪಡೀಲ್, ಸಂಘದ ಎಲ್ಲಾ ಸದಸ್ಯರು, ಕಾಲೇಜಿನ ಪ್ರಾಂಶುಪಾಲ ಓಮನ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಮಮತಾ ಶಾಂತಿ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶೋಭಾ ಎಲ್.ಎನ್., ಹಾಗೂ ಶಿಕ್ಷಕ–ಶಿಕ್ಷಕೇತರ ವೃಂದ ಉಪಸ್ಥಿತರಿದ್ದರು.
ಒಟ್ಟು 9 ಶಾಲೆಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದರು.
ಕಿರಿಯ ವಿಭಾಗ:
• ಪ್ರಥಮ ಸಮಗ್ರ ಚಾಂಪಿಯನ್: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಿಟ್ಟಡೆ
• ದ್ವಿತೀಯ ಸಮಗ್ರ ಚಾಂಪಿಯನ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ, ನಿಟ್ಟಡೆ ವೇಣೂರು
ಹಿರಿಯ ವಿಭಾಗ:
• ಪ್ರಥಮ ಸಮಗ್ರ ಚಾಂಪಿಯನ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ, ನಿಟ್ಟಡೆ ವೇಣೂರು
• ದ್ವಿತೀಯ ಸಮಗ್ರ ಚಾಂಪಿಯನ್: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕೆ ಡಿ
ಕಾಲೇಜಿನ ಉಪನ್ಯಾಸಕ ಮನೋಜ್ ಸ್ವಾಗತಿಸಿ, ಪ್ರೌಢಶಾಲಾ ವಿಭಾಗದ ಕನ್ನಡ ಶಿಕ್ಷಕ ಸುಮನ್ ಮತ್ತು ಆಂಗ್ಲ ಭಾಷಾ ಶಿಕ್ಷಕಿ ರಶ್ಮಿ ನಿರೂಪಿಸಿದರು. ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶುಭ ವಂದನೆ ಸಲ್ಲಿಸಿದರು.

