ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ)ಯಿಂದ ಪುತ್ತೂರು ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದು, ಇಂಗ್ಲಿಷ್ ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ನಿಶ್ಮಿತಾ ಪ್ರಥಮ ಸ್ಥಾನ, ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಕೀರ್ತನಾ ದ್ವಿತೀಯ ಸ್ಥಾನ, ಕನ್ನಡ ಪ್ರಬಂಧದಲ್ಲಿ ಪ್ರಥಮ ಕಲಾ ವಿಭಾಗದ ಇಂದುಮತಿ ದ್ವಿತೀಯ ಸ್ಥಾನ, ಜನಪದ ಗೀತೆ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಪಂಚಮಿ ದ್ವಿತೀಯ ಸ್ಥಾನ, ಜನಪದ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಭಾವನಾ ದ್ವಿತೀಯ ಸ್ಥಾನ, ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಯಶಸ್ವಿ ಮತ್ತು ಕೃತಿಕಾ ದ್ವಿತೀಯ ಸ್ಥಾನ ಪಡೆದುಕೊಂಡು ಮೈಸೂರು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಹಾಗೆಯೇ ಏಕಪಾತ್ರಾಭಿನಯದಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಮೌಲ್ಯ ಯು. ಶೆಟ್ಟಿ ಮತ್ತು ವಿಜ್ಞಾನ ಮಾಡಲ್ ನಲ್ಲಿ ಪ್ರಥಮ ವಿಜ್ಞಾನ ವಿಭಾಗದ ಸರ್ವೇಶ್ ಸಾಲಿಯಾನ್ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ವಿಭಾಗಿಯ ಮಟ್ಟಕ್ಕೆ ಆಯ್ಕೆ

