ಕಕ್ಯಪದವು: ಪಾದೇಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪ್ರೌಢ, ಪದವಿ ಪೂರ್ವ ಹಾಗೂ ಪದವಿ ವಿಭಾಗದ ವಿದ್ಯಾರ್ಥಿಗಳಿಂದ ತಣ್ಣೀರುಬಾವಿ ಕಡಲತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನ.21ರಂದು ಯಶಸ್ವಿಯಾಗಿ ನಡೆಸಲಾಯಿತು. ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ಅತಿಥಿಗಳ ಸಕ್ರಿಯ ಭಾಗವಹಿಸುವಿಕೆಯಿಂದ ಕಡಲತೀರದಲ್ಲಿ ಕಸ ಸಂಗ್ರಹ, ಪ್ಲಾಸ್ಟಿಕ್ ನಿವಾರಣೆ ಹಾಗೂ ತ್ಯಾಜ್ಯ ವಿಭಜನೆ ಕುರಿತು ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಸ್ವಿಮ್ಮಿಂಗ್ ಅಸೋಸಿಯೇಷನ್ ನ ಅಧ್ಯಕ್ಷ ಯತೀಶ್ ರೈ, ಪ್ರಾಣಿ ರಕ್ಷಣಾ ಮತ್ತು ಆಹಾರ ಕೇಂದ್ರದ ರಜನಿ ಹಾಗೂ ದಾಮೋದರ ಶೆಟ್ಟಿ,
ಹಾಗೂ ಸಂಸ್ಥೆಯ ಆಡಳಿತ ಮಂಡಳಿಯ ಮುಖ್ಯಸ್ಥೆ ಬಬಿತಾ ಆರ್. ನಾಥ್, ಕಾರ್ಯದರ್ಶಿ ಶಿವಾಣಿ ಆರ್. ನಾಥ್, ಟ್ರಸ್ಟಿ ಜಯನಿ ಆರ್. ನಾಥ್, ಪ್ರಾಂಶುಪಾಲ ಜೋಸ್ಟನ್ ಲೋಬೋ, ಸಂಯೋಜಕ ಯಶವಂತ್ ಜಿ. ನಾಯಕ್, ಪದವಿ ವಿಭಾಗ ಮುಖ್ಯಸ್ಥೆ ದೀಕ್ಷಿತಾ, ಪದವಿ ಪೂರ್ವ ವಿಭಾಗದ ಮುಖ್ಯಸ್ಥ ಸೌಮ್ಯಾ ಎನ್. ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಿದ್ದರು.
ವಿದ್ಯಾರ್ಥಿಗಳಲ್ಲಿ ಜವಾಬ್ದಾರಿಯುತ ನಾಗರಿಕತನ ಮತ್ತು ಪರಿಸರ ಕಾಳಜಿ ಬೆಳೆಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಬೇಕು ಎಂಬ ಆಶಯದೊಂದಿಗೆ ಸಂಸ್ಥೆಯ ಆಡಳಿತ ಮಂಡಳಿಯು ಸಮಾಜಮುಖಿ ಚಟುವಟಿಕೆಗಳಿಗೆ ಪ್ರೋತ್ಸಾಹವನ್ನು ನೀಡಿ ಮೆಚ್ಚುಗೆ ವ್ಯಕ್ತಪಡಿಸಿತು. ಸಂಸ್ಥೆಯ ಟ್ರಸ್ಟಿ ಯಜ್ನೇಶ್ ರಾಜ್ ಅವರು ಎಲ್ಲಾ ಅತಿಥಿಗಳು, ಬೋಧಕ – ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳಿಗೆ ಆತ್ಮೀಯ ಸ್ವಾಗತಿಸಿ,” ಪರಿಸರ ಸಂರಕ್ಷಣೆ, ಸಮುದ್ರ ಜೀವಿಗಳ ರಕ್ಷಣಾ ಜವಾಬ್ದಾರಿ ಮತ್ತು ಸಮಾಜ ಸೇವೆಯು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ” ಎಂಬ ಮಹತ್ವದ ಮಾತುಗಳೊಂದಿಗೆ ಧನ್ಯವಾದ ಸಮರ್ಪಿಸಿದರು.

