




ಉಜಿರೆ: ಸುಳ್ಯ ತಾಲೂಕಿನ ಪಂಜದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಅತ್ಲೇಟಿಕ್ಸ್ ಸ್ಪರ್ಧೆಯ 17ರ ವಯೋಮಾನದ ಬಾಲಕಿಯರ ಗುಂಡು ಎಸೆತದಲ್ಲಿ ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಕುಮಾರಿ ಅನೀಶ ಪ್ರಥಮ ಸ್ಥಾನ ಪಡೆದಿದ್ದಾರೆ.

11.43ಮೀ ದೂರಕ್ಕೆ ಎಸೆದು ಕೂಟದಲ್ಲಿಯೇ ವಿನೂತನ ಸಾಧನೆ ಮೆರೆದಿದ್ದಾರೆ. ಈ ಮೂಲಕ ಬಾಗಲಕೋಟೆಯಲ್ಲಿ ನಡೆಯಲ್ಲಿರುವ ರಾಜ್ಯ ಮಟ್ಟದ ಬಾಲಕರ- ಬಾಲಕಿಯರ ಅತ್ಲೇಟಿಕ್ಸ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.
ಅವರಿಗೆ ಎಸ್.ಡಿ.ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿ ಸಮೂಹ ಅಭಿನಂದಿಸಿರುತ್ತಾರೆ









