




ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಇವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ. ಅಬ್ದುಲ್ ಜಬ್ಬರ್ ನೇಮಕ ಮಾಡಿ ಆದೇಶಿಸಿದ್ದಾರೆ.

ಪ್ರವೀಣ ಫೆರ್ನಾಂಡಿಸ್ ಹಳ್ಳಿಮನೆ ಅವರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿ ಪಕ್ಷದ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುತ್ತಾರೆ. ಪಕ್ಷದ ಸಿದ್ದಾಂತ, ಸಾಮಾಜಿಕ ನ್ಯಾಯ, ಜಾತ್ಯತೀತ ತತ್ವ ಹಾಗೂ ಸಂವಿಧಾನ ನಂಬಿಕೆಯಲ್ಲಿ ಅಚಲರಾದವರು. ಸದರಿಯವರ ಕಾಂಗ್ರೆಸ್ ಪಕ್ಷದ ನಿಷ್ಠೆಯನ್ನು ಗುರುತಿಸಿ ಇದೀಗ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಾಂಗ್ರೆಸ್ ಪಕ್ಷ ನೇಮಕ ಮಾಡಿದೆ.









