Site icon Suddi Belthangady

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ

ಮಚ್ಚಿನ: ಗ್ರಾಮ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ನ.21ರಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು. ದೇವಸ್ಥಾನ ಆಡಳಿತ ಮೊಕ್ತೇಸರ ಪುತ್ರ ವಿಷು ಸಂಪಿಗೆತ್ತಾಯ, ಕುವೆಟ್ಟು ಬಿಜೆಪಿ ಮಹಾಶಕ್ತಿ ಕೇಂದ್ರ ಅಧ್ಯಕ್ಷರು- ಮಚ್ಚಿನ ಪಂಚಾಯತ್ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಚಂದ್ರಕಾಂತ್ ಗೌಡ ನಿಡ್ಡಾಜೆ, ಮಾಣೂರು ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹೊನ್ನಪ್ಪ ಕುಲಾಲ್, ಮಚ್ಚಿನ ಪಂಚಾಯತ್ ಅಧ್ಯಕ್ಷ ರುಕ್ಮಿಣಿ, ಉಪಾಧ್ಯಕ್ಷ ಚಿದಾನಂದ ಪೂಜಾರಿ ಸೋಮಾವತಿ, ಮಚ್ಚಿನ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಸಾಲ್ಯಾನ್, ಉಪಾಧ್ಯಕ್ಷ ಶ್ರೀಧರ್ ಪೂಜಾರಿ ಆಟ್ಲ, ಪಕ್ಷದ ಹಿರಿಯ ಕಾರ್ಯಕರ್ತ ಪದ್ಮನಾಭ ಅರ್ಕಜೆ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯದರ್ಶಿ ವಸಂತಿ ಮಚ್ಚಿನ, ಶಕ್ತಿ ಕೇಂದ್ರ ಪ್ರಮುಖ್ ನಾರಾಯಣ ಶೆಟ್ಟಿ ನೆತ್ತರ, ಗ್ರಾಮ ಪಂಚಾಯತ್ ಸದಸ್ಯರಾದ ರಮ್ಯಶ್ರೀ, ಜಯಶ್ರೀ, ಚೇತನ್ ಪಲ್ಲತಳ, ಜಿಲ್ಲಾ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯ ಹೇಮಂತ್ ಶೆಟ್ಟಿ ಮಚ್ಚಿನ, ದೇವಸ್ಥಾನ ಮ್ಯಾನೇಜರ್ ಬಾಲಕೃಷ್ಣ ಬಿ., ಅನೇಕ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version