




ನಡ: ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಜರುಗಿತು. ಸಂಸ್ಥೆಯ ನಿವೃತ್ತ ಪ್ರಾಂಶುಪಾಲ ಚಂದ್ರಶೇಖರ್ ಅವರು ಕ್ರೀಡಾ ಜ್ಯೋತಿಯ ಮೂಲಕ ದೀಪ ಬೆಳಗಿ ಉದ್ಘಾಟಿಸಿದರು. ನಂತರ ಮಾತನಾಡಿ “ಗೆದ್ದರೆ ಅನುಭವ ಸಿಗುತ್ತದೆ ಸೋತರೆ ಜೀವನ ಪಾಠವಾಗುತ್ತದೆ. ಸೋಲು ಗೆಲುವುಗಳೆರಡನ್ನು ಸಮಾನವಾಗಿ ಸ್ವೀಕರಿಸಬೇಕು.” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಚಾರ್ಯ ಆ್ಯಂಟನಿ ಟಿ. ಪಿ. ಧ್ವಜಾರೋಹಣಗೈದು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕ್ರೀಡಾ ಸಾಧನೆ ಬಗ್ಗೆ ಅಭಿಮಾನದ ಮಾತನ್ನಾಡಿದರು. ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಂಜುಳಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.

ಕನ್ಯಾಡಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಪ್ರವೀಣ್ ವಿ.ಜಿ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಅಜಿತ್ ಆರಿಗ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಾದ್ಯ ಘೋಷಗಳೊಂದಿಗೆ ಪಥ ಸಂಚಲನ ಬಹಳ ಆಕರ್ಷಕವಾಗಿತ್ತು. ಬೆಳ್ತಂಗಡಿ ಎಸ್. ಡಿ. ಎಂ ಸಂಸ್ಥೆಯ ದೈಹಿಕ ಶಿಕ್ಷಕ ಪ್ರವೀಣ್ ಹಾಗೂ ಉಜಿರೆ ಜನಾರ್ಧನ ಶಾಲೆಯ ದೈಹಿಕ ಶಿಕ್ಷಕ ಗಿರೀಶ್ ಸಹಕಾರದಿಂದ ಕ್ರೀಡಾಕೂಟ ಯಶಸ್ವಿಯಾಯಿತು. ಸಂಸ್ಥೆಯ ಪ್ರಾಂಶುಪಾಲೆ ಲಿಲ್ಲಿ ಪಿ.ವಿ. ಸ್ವಾಗತಿಸಿ, ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಪವಿತ್ರ ನಿರೂಪಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ವಸಂತಿ ಪಿ. ವಂದಿಸಿದರು.









