




ಮಚ್ಚಿನ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರತಿಭಾ ಸಂಭ್ರಮ, ಶಾಲಾ ವಾರ್ಷಿಕೋತ್ಸವವು ನ. 21ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ತಾಲೂಕು ಶಾಸಕ ಹರೀಶ್ ಪೂಂಜ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಸಂಸದ ಕ್ಯಾ. ಬ್ರಿಜೇಶ್ ಚೌಟ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ, ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಸೋಮಾವತಿ, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ, ಶಾಲಾ ಪ್ರಾಂಶುಪಾಲೆ ಅಕ್ಷತಾ, ಪೋಷಕ ಸಮಿತಿ ಸದಸ್ಯರಾದ ಸದಾನಂದ ಶೆಟ್ಟಿ ಮತ್ತು ಲತಾ ಅವರು ಉಪಸ್ಥಿತರಿದ್ದರು.


2024-25ನೇ ಸಾಲಿನಲ್ಲಿ ಎಸ್. ಎಸ್. ಎಲ್. ಸಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾ ಕೂಟದಲ್ಲಿ ಮತ್ತು ಕಲಿಯುಕೆಯಲ್ಲಿ ಶ್ರೇಣಿ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಪೋಷಕರ ಆಟೋಟ ಸ್ಪರ್ಧೆಗಳ ಬಹುಮಾನ ವಿತರಿಸಲಾಯಿತು. ಶಾಲೆಯ ಅಭಿವೃದ್ಧಿಗೆ ಕೊಡುಗೆ ನೀಡಿದ ದಾನಿಗಳಿಗೆ ಸನ್ಮಾನಿಸಲಾಯಿತು. ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಾಲಾ ಪ್ರಾಂಶುಪಾಲೆ ಅಕ್ಷತಾ ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಶಾಲಾ ಶಿಕ್ಷಕಿಯರಾದ ಆಶಾ ಪೈ ಹಾಗೂ ರಶ್ಮಿತ ನಡೆಸಿದರು. ಖಾಲಿದ್ ಬಿ. ವಂದಿಸಿದರು. ✍️.ಹರ್ಷ ಬಳ್ಳಮಂಜ









