




ಕಕ್ಯಪದವು: ಅ.13ರಂದು ನಡೆದ ಜಿಲ್ಲಾಮಟ್ಟದ 14ರ ವಯೋಮಾನದ ತ್ರೋಬಾಲ್ ಪಂದ್ಯಾಕೂಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದು, ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್. ಸಿ. ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಹೆಮ್ಮೆಯ ಕ್ರೀಡಾಪಟುಗಳಾದ ಎಂಟನೇ ತರಗತಿಯ ಅಧೀಶ್ ಎಸ್. ಹಾಗೂ ಅಬ್ದುಲ್ ರೆಹಮಾನ್ ಅವರು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ
ನ. 22 ಮತ್ತು 23ರಂದು ಚಿಕ್ಕಮಗಳೂರಿನಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟದ ತ್ರೋಬಾಲ್ ಪಂದ್ಯಾಕೂಟದಲ್ಲಿ ಭಾಗವಹಿಸಲಿದ್ದಾರೆ. ಪ್ರಶಂಸಾರ್ಹ ಸಾಧನೆಗೈದ ವಿಧ್ಯಾರ್ಥಿಗಳ ಪರಿಶ್ರಮ ಹಾಗೂ ಕ್ರೀಡಾ ಸ್ಫೂರ್ತಿಗೆ ವಿದ್ಯಾಸಂಸ್ಥೆಯು ಸದಾ ಪ್ರೋತ್ಸಾಹವನ್ನು ನೀಡುತ್ತಾ ಬಂದಿದ್ದು, ಕ್ರೀಡಾ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿ ಮೈಸೂರು ವಿಭಾಗ ಮಟ್ಟದ ಪಂದ್ಯಾಕೂಟದಲ್ಲಿ ಭಾಗವಹಿಸುತ್ತಿರುವುದು ಶ್ಲಾಘನೀಯ.

ಅತ್ಯುತ್ತಮ ಸಾಧನೆ ಮಾಡಿದ ಈ ವಿದ್ಯಾರ್ಥಿಗಳಿಗೆ, ಅವರ ಮುಂದಿನ ಕ್ರೀಡಾ ಸಾಧನೆ ಸಂಸ್ಥೆಗೆ ಹಾಗೂ ಊರಿಗೆ ಇನ್ನಷ್ಟು ಕೀರ್ತಿ ಯಶಸ್ಸನ್ನು ತರಲಿ ಎಂಬುದಾಗಿ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಂಯೋಜಕರು, ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಕಿ ಹಾಗೂ ಎಲ್ಲಾ ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿ ಶುಭ ಹಾರೈಸಿದರು.









