ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಸಹಯೋಗದೊಂದಿಗೆ, ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ, ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆ ಹಾಗೂ ಶ್ರೀ ಧ. ಮಂ ಅನುದಾನಿತ ಸೆಕೆಂಡರಿ ಶಾಲೆ ಇದರ ಸಂಯುಕ್ತ ಆಶ್ರಯದಲ್ಲಿ ರತ್ನವರ್ಮ ಹೆಗ್ಗಡೆ ಕ್ರೀಡಾಂಣದಲ್ಲಿ ವಾರ್ಷಿಕ ಕ್ರೀಡಾ ಕೂಟ ನಡೆಯಿತು.
ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಹಾಗೂ ಮಾಲಾಡಿ ಸ. ಹಿ. ಪ್ರಾ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜಯರಾಜ್ ಜೈನ್ ಉದ್ಘಾಟಕರಾಗಿ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಉಜಿರೆ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಧನ್ಯಕುಮಾರ್ ಹಾಗೂ ಉಜಿರೆ ಎಸ್.ಡಿ.ಎಮ್ ಸ್ಪೋರ್ಟ್ಸ್ ಕ್ಲಬ್ ಕ್ರೀಡಾ ಕಾರ್ಯದರ್ಶಿ ರಮೇಶ್ ಎಚ್. ಅವರ ಗೌರವ ಉಪಸ್ಥಿತಿಯಲ್ಲಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಪ್ರಾಂಶುಪಾಲ ಮನಮೋಹನ್ ನಾಯಕ್ ಕೆ.ಜಿ., ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮೀ, ಶ್ರೀ. ಧ. ಮಂ ಅನುದಾನಿತ ಸೆಕೆಂಡರಿ ಶಾಲೆಯ ಮುಖ್ಯೋಪಾಧ್ಯಾಯಿನಿ ವಿದ್ಯಾ ಟಿ. ಅವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಎಸ್.ಡಿ.ಎಮ್ ಬಿ.ವೈ.ಎನ್.ಎಸ್ ಕಾಲೇಜಿನ ಪಿ.ಡಿ. ಧರ್ಮೇಂದ್ರ ಅವರು ನಿರೂಪಿಸಿದರು.

