Site icon Suddi Belthangady

ಉರೂಸ್ ಗೆ ಧ್ವನಿವರ್ಧಕ ಬಳಸಲು ಅನುಮತಿ ನೀಡುವಂತೆ ಮನವಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಾದ್ಯಂತ ಹಲವಾರು ವರ್ಷಗಳಿಂದ ಕೆಲವು ಮುಸ್ಲಿಮ್ ಧಾರ್ಮಿಕ ಕೇಂದ್ರಗಳಲ್ಲಿ ಉರೂಸ್ ಕಾರ್ಯಕ್ರಮ ನಡೆಯುತ್ತಾ ಬಂದಿರುತ್ತದೆ. ಹಾಗೆಯೇ 2026ನೇ ಸಾಲಿನಲ್ಲಿ ಕೂಡಾ ಜನವರಿ ತಿಂಗಳಿನಿಂದ ಎಪ್ರಿಲ್ ತಿಂಗಳಿನವರೆಗೆ ತಾಲೂಕಿನಲ್ಲಿ ಹಲವು ಕಡೆ ಉರೂಸ್ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ರಾತ್ರಿ 10 ಗಂಟೆಯ ನಂತರವು ಧ್ವನಿವರ್ಧಕ ಬಳಸಿ ಧಾರ್ಮಿಕ ಕಾರ್ಯಕ್ರಮ ನಡೆಸಲು ಸಂಬಂಧಪಟ್ಟವರಿಗೆ ಆದೇಶಿಸಲು ಸೂಚಿಸುವಂತೆ ಕೋರಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ನಗರ ಘಟಕದ ಅಧ್ಯಕ್ಷ ಅಬ್ದುಲ್ ಕರೀಮ್ ಗೇರುಕಟ್ಟೆ ಮನವಿ ಸಲ್ಲಿಸಿದ್ದಾರೆ.

Exit mobile version