ಬೆಳ್ತಂಗಡಿ: ತಾಲೂಕಿನ ಮಲವಂತಿಗೆ ಗ್ರಾಮದ ಪಾಮಾಜಿ ಎಂಬ ಪ್ರದೇಶದಲ್ಲಿ ಇದುವರೆಗೂ ಸುಮಾರು 55 ಮನೆಗಳಿರುವ ಜನವಸತಿ ಪ್ರದೇಶಕ್ಕೆ ರಸ್ತೆ ಸಂಪರ್ಕವೇ ಇರಲಿಲ್ಲ. ಈ ಸಮಸ್ಯೆ ಶಾಸಕರ ಗಮನಕ್ಕೆ ಬಂದ ಕೂಡಲೇ ಸಂಪರ್ಕಕ್ಕೆ ಅನುಕೂಲವಾಗುವಂತೆ ನದಿಗೆ ಅಡ್ಡಲಾಗಿ ಸೇತುವೆಯನ್ನು ನಿರ್ಮಿಸಲು ಅನುದಾನ ಒದಗಿಸಿ ಕಾಮಗಾರಿ ಪೂರ್ಣಗೊಂಡಿತ್ತು.
ಆದರೆ ಈ 50 ಮನೆಗಳಿಗೆ ರಸ್ತೆ ನಿರ್ಮಿಸಲು ಪಟ್ಟ ಜಮೀನಿನಲ್ಲಿ ರಸ್ತೆ ಹಾದುಹೋಗಬೇಕಾಗಿದ್ದರಿಂದ ರಸ್ತೆ ಕಾಮಗಾರಿ ವಿಳಂಬವಾಗಿತ್ತು. ಇದನ್ನು ಅರಿತ ಶಾಸಕರು ಸ್ಥಳೀಯ ನಿವಾಸಿಗಳಲ್ಲಿ ಚರ್ಚಿಸಿ ತಮ್ಮ ಪಟ್ಟ ಜಾಗವನ್ನು ರಸ್ತೆ ನಿರ್ಮಿಸಲು ನೀಡಿ ಸಹಕರಿಸಿದ ಪರಿಣಾಮ ಅತ್ಯಂತ ಸಂಭ್ರಮದಿಂದ
ನಿರ್ಮಾಣಗೊಳ್ಳಲಿರುವ ರಸ್ತೆಗೆ ಶಾಸಕ ಹರೀಶ್ ಪೂಂಜರವರು ಅನುದಾನವನ್ನು ಒದಗಿಸಿ ಶಿಲಾನ್ಯಾಸ ನೆರವೇರಿಸಿದ ಕೂಡಲೇ ಕಾಮಗಾರಿಯು ಆರಂಭಗೊಂಡಿರುತ್ತದೆ.
ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಲಾಯಿಲ ಮಹಾಶಕ್ತಿ ಕೇಂದ್ರ ಅಧ್ಯಕ್ಷರು & ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಕಾಶ್ ಜೈನ್, ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ ಲಾಯಿಲ, ಶಕ್ತಿಕೇಂದ್ರ ಅಧ್ಯಕ್ಷ ಮದುಸೂದನ್, ಮಂಡಲ ಕಾರ್ಯದರ್ಶಿ ಪ್ರಭಾಕರ್ ಆಚಾರ್ಯ, ಪಂಚಾಯತ್ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.

