




ಉಜಿರೆ: ಬೆಳಾಲು ರಸ್ತೆಯ ನಿನ್ನಿಕಲ್ ನಲ್ಲಿ ಸಿಮೆಂಟ್ ಇಟ್ಟಿಗೆ ತಯಾರಿಕಾ ಘಟಕ ಶ್ರೀ ಮದುಮುಕ ಎಂಟರ್ ಪ್ರೈಸಸ್ ನ. 23ರಂದು ಉದ್ಘಾಟನೆಗೊಂಡಿತು.

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರ ಶರತ್ ಕೃಷ್ಣ ಪಡುವೆಟ್ನಾಯ ನೂತನ ಘಟಕವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಬಳಿಕ ಇಟ್ಟಿಗೆ ತಯಾರಿಕಾ ಯಂತ್ರಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಹಾಸನ ಜಿಲ್ಲಾ ಸತ್ರ ನ್ಯಾಯಾಲಯದ ಸರಕಾರಿ ಅಭಿಯೋಜಕರು ವಿನಯರಾಣಿ ನೂತನ ತಯಾರಿಕಾ ಘಟಕವನ್ನು ರಿಬ್ಬನ್ ಕಟ್ ಮಾಡುವ ಮೂಲಕ ಉದ್ಘಾಟಿಸಿದರು.


ಬೆಳ್ತಂಗಡಿ ಬಂಟರ ಸಂಘದ ಮಾಜಿ ಅಧ್ಯಕ್ಷ ರಘುರಾಮ ಶೆಟ್ಟಿ ಸಾಧನಾ ನೂತನ ಕಾಂಕ್ರೀಟ್ ಮಿಷನ್ ಗೆ ಚಾಲನೆ ನೀಡಿದರು. ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ಜಯಂತ ಶೆಟ್ಟಿ ಕುಂಟಿನಿ ಶುಭ ಹಾರೈಸಿದರು.
ಅಧ್ಯಕ್ಷತೆಯನ್ನು ಸಂಸ್ಥೆಯ ಮಾಲಕರು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು, ಎರ್ನೋಡಿ ಶ್ರೀ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದ ಆಡಳಿತ ಮೊಕ್ತೇಸರ ಬಾಬು ಮೊಗೇರ ಎರ್ನೋಡಿ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಊರಿನ ಗಣ್ಯರು, ಹಿತೈಷಿಗಳು, ಕುಟುಂಬ ವರ್ಗದವರು ಹಾಜರಿದ್ದರು. ಸೃಜನ್ ಪ್ರಾರ್ಥನೆ ಗೈದರು. ಸುನೀಲ್ ಕಾಶಿಬೆಟ್ಟು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.









