




ಬೆಳ್ತಂಗಡಿ: ತಾಲೂಕು ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ನ.23ರಂದು ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ದೇರಳಕಟ್ಟೆ ವಿಶ್ವವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.


ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ದಂತವೈದ್ಯರು ಡಾ.ಮಹಮ್ಮದ್ ಮಿಫ್ರಾ, ವೈದ್ಯಕೀಯ ಅಧಿಕಾರಿ ಡಾ.ಅಪ್ಸಲ್, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಹಾಗೂ ಯೆನಪೋಯ ಆಸ್ಪತ್ರೆಯ ವೈದ್ಯರ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು.


200ಕ್ಕೂ ಅಧಿಕ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು. ಸಿಯೋನ್ ಸಂಸ್ಥೆಯ ಆಡಳಿತಾಧಿಕಾರಿ ಶೋಭಾ ಯು.ಪಿ., ವೈದ್ಯಾಧಿಕಾರಿ ಡಾ.ಶಿವಾನಂದಸ್ವಾಮಿ, ಯೆನೆಪೋಯ ಸಂಸ್ಥೆಯ ವೈದ್ಯಕೀಯ ಸಮಾಜ ಸೇವಕಿ ಗಾಯತ್ರಿ ಪೂಜಾರಿ, ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿ ಸಿಂಧು ವಿ.ಎಂ. ಕಾರ್ಯಕ್ರಮ ನಿರೂಪಿಸಿದರು.









