




ಉಜಿರೆ: ನಮ್ಮ ಸುತ್ತ ಮುತ್ತಲಿನ ಪರಿಸರದ ಸ್ವಚ್ಚತೆ ನಮ್ಮೆಲ್ಲರ ಪ್ರಾಥಮಿಕ ಜವಾಬ್ದಾರಿ. ನಾವು ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರವನ್ನು ಹಸ್ತಾಂತರಿಸಬೇಕಾದರೆ ಸ್ವಚ್ಛತೆಯ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರ ಭಾಗಿದಾರಿಕೆ ಬೇಕು. ಸಾಮಾಜಿಕ ಸಂಘ ಸಂಸ್ಥೆಗಳು ಸ್ವಚ್ಛತೆಯ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಮಾಜದಲ್ಲಿ ವ್ಯಾಪಕವಾಗಿ ಅರಿವು ಮತ್ತು ಜಾಗೃತಿಯನ್ನು ಮೂಡಿಸುವತ್ತ ಕಾರ್ಯಪ್ರವೃತರಾಗಬೇಕು ಎಂದು ವಿಶ್ವಕರ್ಮ ಬ್ಯಾಂಕಿನ ಅಧ್ಯಕ್ಷ ಡಾ. ಎಸ್. ಆರ್. ಹರೀಶ್ ಅಚಾರ್ಯ ಅವರು ಹೇಳಿದರು. ಅವರು ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಜಿರೆ ಶಾಖೆಯ ಆಶ್ರಯದಲ್ಲಿ “ ಸ್ವಚ್ಛತಾ ಹೀ ಸೇವಾ “ ಧ್ಯೇಯದೊಂದಿಗೆ ನಡೆದ ಸ್ವಚ್ಛ ಭಾರತ್ ಶ್ರಮದಾನ ಕಾರ್ಯಕ್ರಮದಲ್ಲಿ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡುತಿದ್ದರು. ಹಳೆಪೇಟೆ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಅಧ್ಯಕ್ಷ ಅಬುಬೂಕರ್.ಯು. ಹೆಚ್ ಸುಪ್ರೀಮ್ ಮಾತನಾಡಿ ವಿಶ್ವಕರ್ಮ ಸಹಕಾರ ಬ್ಯಾಂಕ್ ತನ್ನ ಬ್ಯಾಂಕಿಂಗ್ ಚಟುವಟಿಕೆಗಳ ಜೊತೆ ಜೊತೆಗೆ ಸ್ವಚ್ಛತೆಯಂತಹ ಸಾಮಾಜಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಿ ನಡೆಸುತ್ತಿರುವುದು ಶ್ಲಾಘನೀಯ ಹಾಗೂ ಇಂತಹ ಸ್ವಚ್ಛತಾ ಕಾರ್ಯಕ್ರಮಗಳು ಎಲ್ಲರಿಗೂ ಪ್ರೇರಣೆಯಾಗಲಿದೆ ಎಂದು ಅಭಿಪ್ರಾಯ ಹಂಚಿಕೊಂಡರು.


ರೋಟರಿ ಕ್ಲಬ್ ಬೆಳ್ತಂಗಡಿಯ ಅಧ್ಯಕ್ಷ ಪ್ರೊ. ಪ್ರಕಾಶ್ ಪಭು, ಉಜಿರೆ ಹಳೆಪೇಟೆ ಆಟೋ ಮಾಲಕ ಮತ್ತು ಚಾಲಕ ಸಂಘದ ಸ್ಥಾಪಕ ಅಧ್ಯಕ್ಷ ನಜೀರ್ ಕೆ., ಆದರ್ಶ ಸೇವಾ ಟ್ರಸ್ಟ್ ನ ಅಧ್ಯಕ್ಷ ರಮೇಶ್ ಪ್ರಭು ಹಾಗೂ ಎಸ್. ವೈ. ಎಸ್ ಉಜಿರೆ ಯುನಿಟ್ ಅಧ್ಯಕ್ಷ ಅಶ್ರಫ್ ಹೆಚ್. ಅವರು ಹಸಿರು ನಿಶಾನೆ ತೋರಿ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಜಿರೆ ಟಿಬಿ ಕ್ರಾಸ್ ಪರಿಸರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತೆಯ ಶ್ರಮದಾನ ಕಾರ್ಯಕ್ರಮವು ನಡೆಯಿತು.
ಬ್ಯಾಂಕ್ ನ ನಿರ್ದೇಶಕರಾದ ಡಿ. ಬಾಸ್ಕರ ಆಚಾರ್ಯ, ಜಯಪ್ರಕಾಶ್ ಆಚಾರ್ಯ, ಭರತ್ ನಿಡ್ಪಳ್ಳಿ, ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಸಲೀಂ, ಒಕ್ಕಲಿಗ ಸಂಘದ ಗೌರವದ್ಯಕ್ಷ ಗೋಪಾಲಕೃಷ್ಣ ಜಿ.ಕೆ., ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಂಘದ ಅಧ್ಯಕ್ಷ ಗಣೇಶ ಆಚಾರ್ಯ, ಮೊಹಿದ್ದೀನ್ ಜುಮ್ಮಾ ಮಸೀದಿಯ ಕಾರ್ಯದರ್ಶಿ ಆರೀಸ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ವಿಶ್ವನಾಥ್ ಎಸ್. ಮತ್ತು ವಿದ್ಯಾರ್ಥಿಗಳು, ಬೆಳ್ತಂಗಡಿ ರೋಟರಿ ಕ್ಲಬ್ ನ ಸದಸ್ಯರು, ಆದರ್ಶ ಸೇವಾ ಟ್ರಸ್ಟ್ ನ ಸದಸ್ಯರು, ಉಜಿರೆ ಹಳೆಪೇಟೆ ಆಟೋ ಚಾಲಕ ಮತ್ತು ಮಾಲಕ ಅಸೋಸಿಯೇಷನ್ ಟಿ.ಬಿ. ಕ್ರಾಸ್ ಸದಸ್ಯರು, ಚಾರ್ಟರ್ಡ್ ಅಕೌಂಟೆಂಟ್ ಅಭಿನಯ್ ಕುಲಾಲ್ ಬೆಳ್ತಂಗಡಿ, ಎಸ್.ವೈ.ಎಸ್, ಎಸ್.ಎಸ್.ಎಫ್ ಹಾಗೂ ಕೆ.ಎಂ.ಟಿ ಉಜಿರೆಯ ಸದಸ್ಯರು. ಬ್ಯಾಂಕಿನ ಗ್ರಾಹಕರು, ಶಾಖಾ ವ್ಯವಸ್ಥಾಪಕ ಲೋಕೇಶ್ ಎಸ್.ಆರ್. ಮತ್ತು ಸಿಬ್ಬಂದಿ ವರ್ಗ ಸ್ವಯಂ ಸೇವಕರಾಗಿ ಸ್ವಚ್ಛ ಭಾರತ್ ಶ್ರಮದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದರು.









