ಬೆಳ್ತಂಗಡಿ: ಪಟ್ಟಣ ಪಂಚಾಯತ್ ಕಟ್ಟಡದಲ್ಲಿ ಹಲವಾರು ವರ್ಷಗಳಿಂದ ವಿದ್ಯುತ್ ಗುತ್ತಿಗೆದಾರರಾಗಿ ಸೇವೆ ಸಲ್ಲಿಸುತ್ತಿದ್ದ ಬೆನೆಡಿಕ್ಟ್ ವೇಗಸ್ (64ವರ್ಷ) ನ. 23ರಂದು ರಾತ್ರಿ ನಿಧನರಾಗಿದ್ದಾರೆ. ಮೃತರು ಹಲವಾರು ವರ್ಷಗಳಿಂದ ವಿದ್ಯುತ್ ಗುತ್ತಿಗೆದಾರರಾಗಿ, ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಪತ್ನಿ ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಲೀನಾ ವೇಗಸ್, ಮಕ್ಕಳನ್ನು ಅಗಲಿದ್ದಾರೆ.
ವಿದ್ಯುತ್ ಗುತ್ತಿಗೆದಾರ ಬೆನೆಡಿಕ್ಟ್ ವೇಗಸ್ ನಿಧನ

