






ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಶಿರಸಿ, ಮಂಗಳೂರು ಸಂಸ್ಕೃತ ಸಂಘದ ಜಂಟಿ ಸಹಯೋಗದಲ್ಲಿ ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಅಭಿಯಾನ 2025ರ ಅಂಗವಾಗಿ ಮಂಗಳೂರು ರಾಮಕೃಷ್ಣ ಪದವಿ ಪೂರ್ವ ಕಾಲೇಜಿನಲ್ಲಿ ನ. 24ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ಧರ್ಮಸ್ಥಳ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ಆರಾಧ್ಯಾ ಪಿ. ಜೋಷಿ ಪ್ರಾಥಮಿಕ ವಿಭಾಗದಲ್ಲಿ, ಹಾಗೂ 10ನೇ ತರಗತಿಯ ಪೂರ್ವಿ ಭಟ್ ಪ್ರೌಢಶಾಲಾ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ.









