ಲಾಯಿಲ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ 25ನೇ ವರ್ಷದ ಬೆಳ್ಳಿಹಬ್ಬದ ಪ್ರಯುಕ್ತ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿಜ್ಞಾನವಸ್ತು ಪ್ರದರ್ಶನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಈ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, 9ನೇ ತರಗತಿಯ ವಿದ್ಯಾರ್ಥಿಗಳಾದ ಶಿವಪ್ರಸಾದ್ ಮತ್ತು ಎಡ್ರಿನ್‌ಫ್ರಾನ್ಸಿಸ್ ಅವರು ತಮ್ಮ ಸೃಜನಾತ್ಮಕ ಹಾಗೂವೈಜ್ಞಾನಿಕ ಕೌಶಲ್ಯಗಳನ್ನು ಪ್ರದರ್ಶಿಸಿ ಪ್ರಥಮ ಬಹುಮಾನವನ್ನು ಗಳಿಸಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಯನ್ನು ಶಾಲೆಯ ಸಂಚಾಲಕರು, ಪ್ರಾಂಶುಪಾಲರು ಶಿಕ್ಷಕ ವೃಂದ ಹಾಗೂ ಶಾಲಾ ಅಭಿವೃದ್ಧಿ ಮಂಡಳಿಯವರು ಶ್ಲಾಘಿಸಿ ಅಭಿನಂದಿಸಿದ್ದಾರೆ.

