




ಮಚ್ಚಿನ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅವರಿಂದ 7ಲಕ್ಷ ಮೊತ್ತದ ಚೆಕ್ ನ್ನು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಹಾಗೂ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಪ್ರಾರ್ಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷಣ್ ಅವರ ಸಮ್ಮುಖದಲ್ಲಿ ಹಸ್ತಾಂತರಿಸಿದರು.


ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ|| ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ನಿರ್ದೇಶಕರಿಗೆ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸರ್ವ ಸದಸ್ಯರ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸಿದರು. ✍️ಹರ್ಷ ಬಳ್ಳಮಂಜ









