ವೇಣೂರು: ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗದಗ ಇದರ ಸಹಯೋಗದಲ್ಲಿ ನ.25ರಂದು ಗದಗದಲ್ಲಿ ಜರುಗಿದ ರಾಜ್ಯಮಟ್ಟದ ಪ್ರಾಚ್ಯ ಪ್ರಜ್ಞೆ ಭಾಷಣ ಸ್ಪರ್ಧೆಯಲ್ಲಿ ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿನಿ ಧನುಶ್ರೀ ಎಸ್. ಕುಲಾಲ್ ರಾಜ್ಯಮಟ್ಟದಲ್ಲಿ ನಾಲ್ಕು ವಿಭಾಗಗಳಿಂದ ಸ್ಪರ್ಧಿಸಿದ 106 ವಿದ್ಯಾರ್ಥಿ, ವಿದ್ಯಾರ್ಥಿನಿಯರಲ್ಲಿ ಪ್ರಥಮ ಸ್ಥಾನವನ್ನು ಪಡೆಯುವುದರ ಮೂಲಕ ಅದ್ವಿತೀಯ ಸಾಧನೆಯನ್ನು ಪೋಷಕರಿಗೆ, ಶಾಲೆಗೆ, ತಾಲೂಕಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತಾರೆ.
ವಿದ್ಯಾರ್ಥಿನಿಗೆ ಉಪ ಪ್ರಾಂಶುಪಾಲರು, ಶಿಕ್ಷಕರು, ಸಿಬ್ಬಂದಿ ವರ್ಗ, SDMC ಕಾರ್ಯಾಧ್ಯಕ್ಷರು ಮತ್ತು ಸದಸ್ಯರು ಅಭಿನಂದನೆ ಸಲ್ಲಿಸಿದರು.

