




ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿ ಹಾಗೂ ರಾಜ್ಯ ಸಭಾ ಸದಸ್ಯ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಧಳೀಯ ಸಂಸ್ಥೆಯಿಂದ ಹುಟ್ಟುಹಬ್ಬದ ಶುಭಾಶಯವನ್ನು ಕೋರಲಾಯಿತು.


ಹೆಗ್ಗಡೆ ಅವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಎಂಬುದು ಒಂದು ದೊಡ್ಡ ಅಂತರಾಷ್ಟ್ರೀಯ ಸ್ವಯಂ ಸೇವಾ ಸಂಸ್ಥೆ. ಯಾವುದೇ ಕಾರಣಕ್ಕೂ ಇದನ್ನು ಬಿಡದೆ ಸಾಧನೆ ಮಾಡಿ, ನಿಮ್ಮ ವ್ಯಕ್ತಿತ್ವವನ್ನು ಉನ್ನತವಾಗಿ ರೂಪಿಸಿಕೊಳ್ಳಿ. ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಆಯುಕ್ತ ಡಾ. ಎಂ.ಮೋಹನ್ ಆಳ್ವರ ಸಾಧನೆ ಮಹತ್ವದ್ದು, ಪಿಲಿಕುಲದಲ್ಲಿ ಅವರು ನಿರ್ಮಿಸುತ್ತಿರುವ ಸ್ಕೌಟ್ ಗೈಡ್ ತರಬೇತಿ ಕೇಂದ್ರವನ್ನು ನೋಡಿ ನನಗೆ ತುಂಬಾ ಅಚ್ಚರಿಯಾಗುತ್ತದೆ. ಅವರ ಕೆಲಸ ಸರ್ವರಿಗೂ ಅನುಕರಣೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿ, ಉಪಸ್ಥಿತರಿದ್ದ ರೋವರ್ ವಿದ್ಯಾರ್ಥಿಗಳಿಗೆ ಜೀವನದುದ್ದಕ್ಕೂ ಸ್ಕೌಟ್ ನಲ್ಲಿ ಮುಂದುವರೆಯುವಂತೆ ಹುರಿದುಂಬಿಸಿ ಶುಭ ಹಾರೈಸಿದರು.
ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಪ್ರಮೀಳಾ ಪೂಜಾರಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು, ಉಜಿರೆಯ ರೋವರ್ ಸ್ಕೌಟ್ ಲೀಡರ್ ಲಕ್ಷ್ಮೀಶ ಪಿ. ಭಟ್ ಹಾಗೂ ರೋವರ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.









