ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜಿನಲ್ಲಿ ವಾಣಿಜ್ಯ ಚಟುವಟಿಕೆ

0

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಡೆಸುತ್ತಿರುವ ಎಲ್‌.ಸಿ.ಆರ್. ಇಂಡಿಯನ್ ಪದವಿ ಕಾಲೇಜಿನಲ್ಲಿ ನ. 26ರಂದು ವಿದ್ಯಾರ್ಥಿಗಳಿಗಾಗಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ವಿದ್ಯಾರ್ಥಿಗಳಲ್ಲಿ ವಾಣಿಜ್ಯ ನಿರ್ವಹಣಾ ಕೌಶಲ್ಯ, ಸೃಜನಾತ್ಮಕತೆ ಹಾಗೂ ವಾಣಿಜ್ಯ ಕ್ಷೇತ್ರದ ಅರಿವು ವೃದ್ಧಿಸುವ ಉದ್ದೇಶದಿಂದ, ಉಪನ್ಯಾಸಕರ ಮಾರ್ಗದರ್ಶನದಲ್ಲಿ “ಡೊಮಿನೇಟರ್ಸ್” ವಿದ್ಯಾರ್ಥಿ ತಂಡವು ಈ ಚಟುವಟಿಕೆಯನ್ನು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲ ಜೋಸ್ಟಾನ್ ಲೋಬೊ, ಸಂಯೋಜಕ ಯಶವಂತ ಜಿ. ನಾಯಕ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ದೀಕ್ಷಿತಾ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

LEAVE A REPLY

Please enter your comment!
Please enter your name here