ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯ ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಸ್ಥಾನ

0

ಉಜಿರೆ: ಶಾಲಾ ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಹಾಗೂ ಅನುಗ್ರಹ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯು ಅನುಗ್ರಹ ಸಭಾಭವನದಲ್ಲಿ ನಡೆಯಿತು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಶಾಲಾ ಪ್ರಾಂಶುಪಾಲ ಫಾ. ವಿಜಯ್ ಲೋಬೊ ಅವರು ಮಾತನಾಡುತ್ತಾ ಇದು ವಿದ್ಯಾರ್ಥಿಗಳ ಬೆಳವಣಿಗೆಗೆ ಪೂರಕವಾಗಿದೆ ಇಲಾಖೆಯ ಪ್ರೋತ್ಸಾಹವನ್ನು ವಿದ್ಯಾರ್ಥಿಗಳು ಸದಪಯೋಗಪಡಿಸಿಕೊಂಡು ಸಾಧನೆ ಮಾಡಬೇಕಿದೆ ಎಂದು ಹೇಳಿದರು. ಸರ್ಕಾರಿ ಪ್ರೌಢಶಾಲೆ ಪುತ್ತಿಲ ಇಲ್ಲಿನ ಮುಖ್ಯಶಿಕ್ಷಕ ಮಹೇಂದ್ರ ಅವರು ವಿಜೇತ ವಿದ್ಯಾರ್ಥಿಗಳನ್ನು ಘೋಷಿಸಿದರು. ವೇದಿಕೆಯಲ್ಲಿ ಶಾಲಾ ಸಂಚಾಲಕ ಫಾ. ಅಬೆಲ್ ಲೋಬೊ ಶಿಕ್ಷಣ ಸಂಯೋಜಕ ಶ್ರೀಸಿದ್ದಲಿಂಗಸ್ವಾಮಿ, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ತೀರ್ಪುಗಾರರಾದ ಶ್ರೀಜ ರೆರಾಲ್ಡ್, ಹರ್ಷಿತ್, ಶರತ್ ಕುಮಾರ್ ಉಪಸ್ಥಿತರಿದ್ದರು.

ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದಲ್ಲಿ ಒಟ್ಟು 63 ತಂಡಗಳು ಭಾಗವಹಿಸಿದ್ದವು. ವೈಯಕ್ತಿಕ ವಿಭಾಗದಲ್ಲಿ ಪಂಚಮ ಅನುಗ್ರಹ ಅಂಗ್ಲ ಮಾಧ್ಯಮ ಶಾಲೆ ಉಜಿರೆ ಪ್ರಥಮ, ಸಮನ್ಯು ಎಸ್‌ಡಿಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ದ್ವಿತೀಯ, ರಾಯಿಸ್ಟನ್ ಯಿಸ್ ಸರಕಾರಿ ಉನ್ನತೀಕರಿಸಿದ ಶಾಲೆ ಕೊರಂಜ ತೃತೀಯ, ಸಾಮೂಹಿಕ ವಿಭಾಗದಲ್ಲಿ ಶಿವಪ್ರಸಾದ್ ಮತ್ತು ಎಡ್ರಿನ್ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆ ಪ್ರಥಮ, ಸುಪ್ರಜಿತ್ ರಾವ್ ಮತ್ತು ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ಲಾಯಿಲ, ಮಹಮ್ಮದ್ ಹಫೀಳ್‌ ಮತ್ತು ಮಹಮ್ಮದ್ ಆಫ್ರಿನ್ ಸರ್ಕಾರಿ ಉನ್ನತಿಕರಿಸಿದ ಶಾಲೆ ಕೊರಂಜ ತೃತೀಯಸ್ಥಾನ ಪಡೆದುಕೊಂಡರು. ಈ ತಂಡಗಳು ನ. 29ರಂದು ಪುತ್ತೂರಿನಲ್ಲಿ ನಡೆಯುವ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿವೆ.

LEAVE A REPLY

Please enter your comment!
Please enter your name here