ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ನ. 26ರಂದು ಸಂವಿಧಾನ ದಿನಾಚರಣೆ ಆಚರಿಸಲಾಯಿತು. ಸಂವಿಧಾನ ದಿನದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ, ಘೋಷಣೆ ಬರೆಯುವುದು, ಭಿತ್ತಿ ಪತ್ರಿಕೆ ಸ್ಪರ್ಧೆ ನಡೆಸಲಾಗಿತ್ತು. ಶಿಕ್ಷಕಿ ಸವಿತಾ ವೇದಪ್ರಕಾಶ್ ಸಂವಿಧಾನದ ಮಹತ್ವದ ಕುರಿತು ಹೇಳಿದರು.
ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ. ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಚಾರ್ವಿ ನಿರೂಪಿಸಿದರು.

