ಉಜಿರೆ: ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಎನ್.ಎಸ್.ಎಸ್. ಘಟಕದಿಂದ ನ.26ರಂದು ಸಂವಿಧಾನ ದಿನಾಚರಣೆ ನಡೆಯಿತು.
ಮುಖ್ಯ ಅತಿಥಿ, ಎಸ್.ಡಿ.ಎಂ. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ನಟರಾಜ್ ಎಚ್.ಕೆ. ಅವರು ಸಂವಿಧಾನ ದಿನ ಆಚರಣೆಯ ಮಹತ್ವ, ಕಾರ್ಯಕ್ರಮದ ವಿಶೇಷತೆ ತಿಳಿಸುವುದರ ಜೊತೆಗೆ ಪ್ರತಿಜ್ಞೆಯನ್ನು ಬೋಧಿಸಿದರು.
ಡಾ. ಬಿ ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಮಹಿಳಾ ಐ.ಟಿ.ಐ. ಕಾಲೇಜಿನ ಪ್ರಾಚಾರ್ಯ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು.
ಎಸ್.ಡಿ.ಎಂ. ಕಾಲೇಜಿನ ಎನ್.ಎಸ್.ಎಸ್. ಘಟಕದ ಯೋಜನಾಧಿಕಾರಿ ಡಾ. ಮಹೇಶ್ ಶೆಟ್ಟಿ ಪ್ರಸ್ತಾವಿಸಿ, ಸ್ವಾಗತಿಸಿದರು. ಎನ್.ಎಸ್.ಎಸ್. ಸ್ವಯಂಸೇವಕಿ ಶ್ರೇಜಾ ನಿರೂಪಿಸಿದರು. ಮಾನ್ಯ ವಂದಿಸಿದರು.

