Site icon Suddi Belthangady

ಮಲೆಬೆಟ್ಟು: ಶ್ರೀ ಮಹಾಗಣಪತಿ, ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಷಷ್ಠಿ ವಿಶೇಷ ಪೂಜೆ

ಉಜಿರೆ: ಮಲೆಬೆಟ್ಟು ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ನ. 26ರಂದು ಮಲೆಬೆಟ್ಟು ಉದ್ಭವ ಶ್ರೀ ಸುಬ್ರಹ್ಮಣೇಶ್ವರ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯ ಷಷ್ಠಿ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳು ಉಜಿರೆಯ ಯು. ಶರತ್ ಕೃಷ್ಣ ಪಡುವೆಟ್ನಾಯರ ಮಾರ್ಗದರ್ಶನದಲ್ಲಿ ವಿವಿಧ ವೈದಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಬೆಳಿಗ್ಗೆ ಶ್ರೀ ಮಹಾಗಣಪತಿ ದೇವರಿಗೆ ಅಭಿಷೇಕ, ಮಂಗಳಾರಾತಿ ನಡೆಯಿತು.

ಶ್ರೀ ಸುಬ್ರಹ್ಮಣ್ಯ ದೇವರಿಗೆ ಕಾರ್ತಿಕ ಪೂಜೆ, ಮಹಾಪೂಜೆ ನಡೆದು ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನದ ಅಭಿವೃದ್ಧಿ ಸಮಿತಿ, ಜೀರ್ಣೋದ್ದಾರ ಸಮಿತಿ, ಭಜನಾ ಮಂಡಳಿಯ ಪದಾಧಿಕಾರಿಗಳು, ಸದಸ್ಯರು, ಊರ ಪರ ಊರ ಭಕ್ತರು ಭಾಗವಹಿಸಿ ಸಹಕರಿಸಿದರು.

Exit mobile version