ಬೆಳ್ತಂಗಡಿ: ಮಂಗಳೂರಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ಬೆಳ್ತಂಗಡಿ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನ.27 ರಂದು ವಕೀಲರ ಭವನದಲ್ಲಿ ನಡೆಯಿತು.
ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಮನು ಬಿ.ಕೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್. ಲೋಬೋ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಧಾನ ಸಿವಿಲ್ ನ್ಯಾಯಾಧೀಶ ಸಂದೇಶ್ ಕೆ., ಬೆಳ್ತಂಗಡಿ ಹಿರಿಯ ವಕೀಲರ ಸಂಘದ ಅಧ್ಯಕ್ಷ ಶಿವಕುಮಾರ್, ವಕೀಲರ ಸಂಘದ ಉಪಾಧ್ಯಕ್ಷ ಶ್ರೀನಿವಾಸ್ ಗೌಡ, ಜೊತೆ ಕಾರ್ಯದರ್ಶಿ ಹರ್ಷಿತ್ ಎಚ್. ಉಪಸ್ಥಿತರಿದ್ದರು. ಹಿರಿಯ ವಕೀಲ ಪಿ.ಸುಬ್ರಹ್ಮಣ್ಯ ಕುಮಾರ್ ಸಂವಿಧಾನ ದಿನಾಚರಣೆ ಕುರಿತು ಮಾತನಾಡಿದರು.
ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ. ಸ್ವಾಗತಿಸಿ, ಕಾರ್ಯಕಾರಿಣಿ ಸಮಿತಿಯ ಸದಸ್ಯರಾದ ಅಸ್ಮಾ ಪಿ. ಮತ್ತು ಲತಾಶ್ರೀ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಮುಮ್ತಾಜ್ ಬೇಗಂ ಧನ್ಯವಾದವಿತ್ತರು.

