ಕೊಯ್ಯೂರು: ಕಸಬ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ದ್ವಿಭಾಷಾ ಮಾಧ್ಯಮದ ಉದ್ಘಾಟನಾ ಸಮಾರಂಭ ನಡೆಯಿತು. ಸಮಾರಂಭದ ಉದ್ಘಾಟನೆಯನ್ನು ಎಸ್. ಡಿ. ಎಂ. ಸಿ ಅಧ್ಯಕ್ಷ ಜಗನ್ನಾಥ ಮತ್ತು ಒಂದನೇ ತರಗತಿ ವಿದ್ಯಾರ್ಥಿಗಳು ಜಂಟಿಯಾಗಿ ನಿರ್ವಹಿಸಿದರು. ಈ ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪುರುಷೋತ್ತಮ ಗೌಡ, ಗ್ರಾಮ ಪಂಚಾಯತ್ ಸದಸ್ಯ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಗಿರೀಶ್ ಆಚಾರ್ಯ, ತಾಯಂದಿರ ಸಮಿತಿ ಅಧ್ಯಕ್ಷೆ ಜಯಂತಿ ಉಪಸ್ಥಿತರಿದ್ದರು.
ಸಂಸ್ಥೆಯ ಪೋಷಕರು ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಆಂಗ್ಲ ಮಾಧ್ಯಮದ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸುವಂತೆ ಕೋರಲಾಯಿತು. ಅಂತೆಯೇ ಸಂಸ್ಥೆಯಲ್ಲಿ ಮುಂದಿನ ದಿನಗಳಲ್ಲಿ ಕನ್ನಡ, ಇಂಗ್ಲೀಷ್ ಎರಡೂ ಮಾಧ್ಯಮಗಳಲ್ಲೂ ಶಿಕ್ಷಣವನ್ನು ನೀಡುವುದರ ಬಗ್ಗೆ ಮಾಹಿತಿ ನೀಡಲಾಯಿತು. ಸಂಸ್ಥೆಯಲ್ಲಿ ಸರ್ಕಾರದಿಂದ ನೀಡಲ್ಪಟ್ಟ ಪ್ರಯೋಜನವನ್ನು ಪಡೆದುಕೊಂಡು ಸಂಸ್ಥೆಯ ಅಸ್ತಿತ್ವವನ್ನು ಕಾಪಾಡುವಂತೆ ಕರೆನೀಡಲಾಯಿತು. ವಿದ್ಯಾರ್ಥಿನಿಯರಾದ ನಿಶ್ಚಿತ, ಪ್ರಾರ್ಥನ, ವರ್ಷ, ಪ್ರಾರ್ಥನೆಗೈದರು. ಸಹಶಿಕ್ಷಕಿ ದೇವಿಬಾಯಿ ಡಿ. ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿಯರಾದ ವಿಜಯಶ್ರೀ, ವೇದಾವತಿ ಸಹಕರಿಸಿದರು. ಮುಖ್ಯ ಶಿಕ್ಷಕಿ ವಸಂತಿ ಕೆ. ಎನ್. ಸ್ವಾಗತಿಸಿ, ವಂದಿಸಿದರು.

