ಗುರುವಾಯನಕೆರೆ: ವಿದ್ಯಾರ್ಥಿಗಳು ವಿದ್ಯಾಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡುವ ವಿದ್ಯಾದೇಗುಲ ಗುರುವಾಯನಕೆರೆಯ ಎಕ್ಸೆಲ್ ಕಾಲೇಜು ವತಿಯಿಂದ ವಿದ್ಯಾಸಾಗರ ಮತ್ತು ಅರಮಲೆ ಬೆಟ್ಟ ಆವರಣದಲ್ಲಿ ನಾಲ್ಕು ದಿನಗಳ ನಾಡು-ನುಡಿಯ ರಾಷ್ಟ್ರೀಯ ಸಮ್ಮೇಳನದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನ. 28ರಂದು ನಡೆಯಿತು.
ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಬೆಳಗಾವಿ ನಿಡುಸೋಸಿ ಮಠದ ನಿಜಲಿಂಗೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿದರು. ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ವೇದಿಕೆಯಲ್ಲಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಫಾ ಕ್ಲಿಫರ್ಡ್ ಸಿಮೋನ್ ಪಿಂಟೋ, ಸುದ್ದಿ ಬಿಡುಗಡೆ ಸಮೂಹ ಸಮೂಹ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ರಾಘವ್ ಶರ್ಮಾ ನಿಡ್ಲೆ, ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಎಕ್ಸೆಲ್ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ನವೀನ್ ಕುಮಾರ್ ಮರಿಕೆ ಮತ್ತು ಡಾ. ಪ್ರಜ್ವಲ್ ಉಪಸ್ಥಿತರಿದ್ದರು.
ಸಂಜೆ 6.30ಕ್ಕೆ ನಡೆಯುವ ಎಕ್ಸೆಲ್ ಪರ್ಬ ಸಮಾರಂಭವನ್ನು ನಟ ರಮೇಶ್ ಅರವಿಂದ್ ಉದ್ಘಾಟಿಸಲಿದ್ದು, ಭಾರತ ಪರಿಕ್ರಮ ಯಾತ್ರಾ ಸಾಧಕ ಸೀತಾರಾಮ ಕೆದಿಲಾಯ, ಡಿಡಿಪಿಐ ಶಶಿಧರ್ ಜಿ.ಎಸ್, ಪತ್ರಕರ್ತ ಯೋಗೀಶ್ ಹೊಳ್ಳ ಎಂ. ಭಾಗವಹಿಸಲಿದ್ದಾರೆ.
ನ.27ರಿಂದ 30ರ ವರೆಗೆ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಸಾಹಿತ್ಯ, ಯಕ್ಷಗಾನ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ. ತಿಳಿಸಿದರು.
ನ. 29ರಂದು ಮಧ್ಯಾಹ್ನ 1.30ಕ್ಕೆ ಶೈಕ್ಷಣಿಕ ಸಾಧಕರಿಗೆ ಗೌರವಾರ್ಪಣೆ ನಡೆಯಲಿದೆ. ಸಂಜೆ 6.30ಕ್ಕೆ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನದಲ್ಲಿ ಮುಖ್ಯಅತಿಥಿಗಳಾಗಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ,ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಅಡಿಷನಲ್ ಎಸ್‌ಪಿ ಅನಿಲ್‌ಕುಮಾರ್ ಭೂಮ ರೆಡ್ಡಿ, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ವೆನ್ಲಾಕ್ ಆಸ್ಪತ್ರೆಯ ಮೂತ್ರಶಾಸ್ತ್ರ ವಿಭಾಗ ಮುಖ್ಯಸ್ಥ ಡಾ| ಸದಾನಂದ ಪೂಜಾರಿ, ಉಜಿರೆ ಎಸ್‌ಡಿಎಂ ಕಾಲೇಜು ಪ್ರಾಂಶುಪಾಲ ಡಾ| ವಿಶ್ವನಾಥ ಪಿ, ಬೆಳ್ತಂಗಡಿ ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಸುವರ್ಣ, ಮೂಡುಬಿದಿರೆಯ ಲೆಕ್ಕ ಪರಿಶೋಧಕ ಆಕಾಶ್ ದೀಪ್ ಭಾಗವಹಿಸಲಿದ್ದಾರೆ.
ನ. 30ರಂದು ಸಂಜೆ 6.30ಕ್ಕೆ ಜರಗುವ ಕಾಲೇಜು ವಾರ್ಷಿಕೋತ್ಸವದಲ್ಲಿ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ನಾಲ್ಕುದಿನವೂ ಬೆಳಗ್ಗೆ 9ರಿಂದ ರಾತ್ರಿ 10.30ರ ವರೆಗೆ ಸಭಾ ಕಾರ್ಯಕ್ರಮಗಳ ಜತೆಗೆ ಎಕ್ಸೆಲ್ ವಿದ್ಯಾರ್ಥಿಗಳ ಸಾಂಸ್ಕೃತಿಕ ವೈವಿಧ್ಯಗಳೊಂದಿಗೆ ನಡೆಯಲಿದೆ ಎಂದು ತಿಳಿಸಿದರು.

