ಅಳದಂಗಡಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ನ. 28ರಂದು ಸಂಜೆ ಅಳದಂಗಡಿಯ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ಭೇಟಿಯಾಗಿ ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ಸತ್ಯದೇವತೆ ದೈವಸ್ಥಾನದ ಆಡಳಿತ ಮೋಕ್ತೇಸರ ಶಿವಪ್ರಸಾದ್ ಅಜಿಲರವರು ವಿಜಯೇಂದ್ರರಿಗೆ ಗೌರವಾರ್ಪಣೆ ಸಲ್ಲಿಸಿದರು.
ಈ ವೇಳೆ ದೈವಸ್ಥಾನದಲ್ಲಿ ಆರಾದಿಸುವ ಸತ್ಯದೇವತೆಯ ಫೋಟೋವನ್ನು ರಾಜ್ಯಾಧ್ಯಕ್ಷರಿಗೆ ನೀಡಲಾಯಿತು. ಈ ವೇಳೆ, ಶಾಸಕ ಹರೀಶ್ ಪೂಂಜ, ಸಂಸದ ಬ್ರಿಜೇಶ್ ಚೌಟ, ವಿಧಾನಪರಿಷತ್ ಸದಸ್ಯ ಧನಂಜಯ ಸರ್ಜಿ ಮುಂತಾದವರು ಉಪಸ್ಥಿತರಿದ್ದರು.

