ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಸಿರಿ ಕೇಂದ್ರ ಕಛೇರಿಗೆ ಭೇಟಿ

0

ಬೆಳ್ತಂಗಡಿ: ಖ್ಯಾತ ಚಲನಚಿತ್ರ ನಟ ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ರಾಯಭಾರಿಯು ರಮೇಶ್ ಅರವಿಂದ್ ಅವರು ನ.29ರಂದು ಬೆಳ್ತಂಗಡಿಯ ಸಿರಿ ಕಛೇರಿಗೆ ಭೇಟಿ ನೀಡಿದರು.

ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ಧನರವರು ರಮೇಶ್ ಅರವಿಂದ್ ಅವರನ್ನು ಪ್ರೀತಿ ಪೂರ್ವಕವಾಗಿ ಸ್ವಾಗತಿಸಿ, ಗೌರವಾರ್ಪಣೆ ಸಲ್ಲಿಸಿದರು.

ಸಿರಿ ಸಿಬ್ಬಂದಿಗಳನ್ನು ಉದ್ದೇಶಿಸಿ ಮಾತನಾಡಿದ ರಮೇಶ್ ಅರವಿಂದರವರು ನಾವು ಯಾವುದೇ ಒಂದು ಕೆಲಸವನ್ನು ಮಾಡಬೇಕಾದರೂ ಇಷ್ಟವಾದ ವ್ಯಕ್ತಿಗಳ ಜೊತೆ ಇಷ್ಟಪಟ್ಟು, ಮನಸಿಟ್ಟು ಮಾಡಬೇಕು. ಹಾಗಿದ್ದಲ್ಲಿ ಮಾತ್ರ ಎಲ್ಲಾ ಕೆಲಸದಲ್ಲೂ ಒಂದು ಅದ್ಬುತವಾದ ಯಶಸ್ಸನ್ನು ಕಾಣಲು ಸಾಧ್ಯ. ಅದೇ ರೀತಿ ಹೆಗ್ಗಡೆಯವರು ಒಂದೇ ಸೂರಿನಡಿ ಸಿರಿಯ ಎಲ್ಲಾ ಉತ್ಪಾದನಾ ಘಟಕಗಳನ್ನೂ ಸ್ಥಾಪಿಸಿ, ಇಲ್ಲಿ ಆಧುನಿಕ ತಂತ್ರಜ್ಞಾನವನ್ನು ಹೊಂದಿರುವ ಮೆಷಿನರಿಗಳನ್ನು ಅಳವಡಿಸಿ ಸಿರಿಯ ಎಲ್ಲಾ ಸಿಬ್ಬಂದಿಗಳಿಗೂ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಒಂದು ವಿಶ್ವಮಟ್ಟದ ಮೂಲಸೌಕರ್ಯವನ್ನು ಒದಗಿಸಿಕೊಟ್ಟಿದ್ದಾರೆ. ಇಂತಹ ಮಹಾನ್ ವ್ಯಕ್ತಿಗಳ ಆಸರೆ ಆಶೀರ್ವಾದ ಸಹಕಾರ ನಮಗೆ ಇರಬೇಕಾದ್ರೆ, ನಾವು ಮಾಡೋ ಪ್ರತಿಯೊಂದು ಕೆಲಸದಲ್ಲೂ ಪ್ರೀತಿ ಶ್ರದ್ಧೆಯನ್ನಿಟ್ಟು ಮಾಡಬೇಕು. ಆಗ ಮಾತ್ರ ಕರ್ನಾಟಕ ರಾಜ್ಯದಲ್ಲಿ ಮನೆಮಾತಾಗಿರುವ ನಮ್ಮ ಸಿರಿ ಬ್ರಾಂಡ್ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆಯಲು ಸಾಧ್ಯವಾಗಿರುತ್ತದೆ. ಹಾಗಾಗಿ ಇಂತಹ ಒಂದು ಅದ್ಬುತವಾದ ಕನಸನ್ನು ಹೊಂದಿರುವ ದಂಪತಿಗಳ ಕನಸನ್ನು ನಾವೆಲ್ಲರೂ ಜೊತೆ ಸೇರಿ ಇಷ್ಟಪಟ್ಟು ದುಡಿಯುವ ಮೂಲಕ ನನಸು ಮಾಡೋಣ ಸಿರಿಯನ್ನು ಇನ್ನಷ್ಟು ಎತ್ತರಕ್ಕೆ ಬೆಳೆಸೋಣ ಎಂದು ಸಿರಿ ಸಿಬ್ಬಂದಿಗಳಿಗೆ ಸ್ಪೂರ್ತಿ ತುಂಬಿದರು.

LEAVE A REPLY

Please enter your comment!
Please enter your name here