




ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನ. 29ರಂದು ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಜುವೆಲ್ ರಿಯಾ ಡಿ ಸೋಜಾ(4ನೇ )ಇಂಗ್ಲೀಷ್ ಕಂಠ ಪಾಠದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.


ವಿದ್ಯಾರ್ಥಿಯನ್ನು ಶಾಲಾ ಸಂಚಾಲಕ ಗುರು ವೋಲ್ಟರ್ ಡಿಮೆಲ್ಲೋ ಹಾಗೂ ಶಾಲಾ ಮುಖ್ಯೋಪಾಧ್ಯಾಯ ಗುರುಗಳು ಕ್ಲಿಫರ್ಡ್ ಪಿಂಟೋರವರು ಅಭಿನಂದಿಸಿದರು.









