




ಕಲ್ಮಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಶ್ರೀಮತಿ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.04 ರಂದು ಉಜಿರೆಗೆ ತಲುಪಲಿದೆ.


ಉಜಿರೆಯಲ್ಲಿ 3.00 ಗಂಟೆಗೆ ವಿವಿಧ ಗಣ್ಯರು ಸ್ವಾಗತಿಸಿ ಚಾಲನೆ ನೀಡಿ ಭವ್ಯ ಶೋಭಾ ಯಾತ್ರೆಯೊಂದಿಗೆ ಧರ್ಮಸ್ಥಳ ಮುಂಡ್ರುಪ್ಪಾಡಿ ಮಾರ್ಗವಾಗಿ ಶ್ರೀ ಕ್ಷೇತ್ರಕ್ಕೆ ತಲುಪಲಿದೆ.ಡಿ. 05 ರಂದು ಶ್ರೀ ಕ್ಷೇತ್ರ ಪಜಿರಡ್ಕದಲ್ಲಿ ಶ್ರೀ ರಾಮ ಕ್ಷೇತ್ರದ ಪೀಠಾಧೀಶ 1008 ಮಹಾಮಂಡಲೇಶ್ವರ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ದಿವ್ಯ ಸಾನಿಧ್ಯ ದೊಂದಿಗೆ ಧ್ವಜಸ್ತಂಬದ ಸ್ಥಾಪನೆ ಕಾರ್ಯಕ್ರಮ ನಡೆಯಲಿದೆ.
ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟನ್ನಾಯ, ಎಸ್ ಡಿ. ಎಂ ಶಿಕ್ಷಣ ಸಂಸ್ಥೆ ಗಳ ಕಾರ್ಯದರ್ಶಿ ಎಸ್. ಸತೀಶ್ಚಂದ್ರ, ಉಜಿರೆ ಲಕ್ಹ್ಮೀ ಗ್ರೂಪ್ ಕೆ. ಮೋಹನ್ ಕುಮಾರ್, ಸಂಧ್ಯಾ ಟ್ರೇಡರ್ಸ್ ಮಾಲಕ ರಾಜೇಶ್ ಪೈ, ಉಜಿರೆ ಸಹಕಾರ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ, ಉದ್ಯಮಿ ಮೋಹನ್ ಶೆಟ್ಟಿಗಾರ ಭಾಗವಹಿಸಲಿದ್ದಾರೆ.









