ಅಳದಂಗಡಿ : ಆಮಂತ್ರಣ ಸೇವಾ ಪ್ರತಿಷ್ಠಾನ ರಿ. ಅಳದಂಗಡಿ ಇವರ ಸಾರಥ್ಯದಲ್ಲಿ ನಡೆಯುತ್ತಿರುವ ಅರುವ ಯಕ್ಷಗಾನ ತರಬೇತಿ ಕೇಂದ್ರದ ನೂತನ ಪದಾಧಿಕಾರಿಗಳ ಆಯ್ಕೆ ನ.30ರಂದು ನಡೆಯಿತು.
ಅಳದಂಗಡಿ ಮೌಂಟ್ ಕಾರ್ಮೆಲ್ ಕಾಂಪ್ಲೆಕ್ಸ್ ನಲ್ಲಿ ನಡೆದ ಹೆತ್ತವರ ಮತ್ತು ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳ ಸಭೆಯ ಅಧ್ಯಕ್ಷತೆಯನ್ನು ಆಮಂತ್ರಣ ಸೇವಾ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿಜಯ ಕುಮಾರ್ ಜೈನ್ ವಹಿಸಿದ್ದರು.
ವೇದಿಕೆಯಲ್ಲಿ ಟ್ರಸ್ಟಿಗಳಾದ ಅರುಣ್ ಅರುವ, ಸದಾನಂದ ಬಿ.ಕುದ್ಯಾಡಿ ಹಾಗೂ ಯಕ್ಷಗಾನ ಗುರು ಪ್ರಭಾಕರ ಶೆಟ್ಟಿ ಉಪಸ್ಥಿತರಿದ್ದು, ಕೆಲವು ಮಾಹಿತಿಗಳನ್ನು ಹಂಚಿಕೊಂಡರು. 2026-2027 ನೇ ಸಾಲಿಗೆ ಕೇಂದ್ರಕ್ಕೆ ಪ್ರಥಮ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಶಿಕ್ಷಕರಾದ ಸದಾಶಿವ ಕರಂಬಾರು, ಉಪಾಧ್ಯಕ್ಷರಾಗಿ ಪವಿತ್ರ ಅಳದಂಗಡಿ , ನೂತನ ಕಾರ್ಯದರ್ಶಿಯಾಗಿ ಸುಲ್ಕೇರಿ ಶ್ರೀರಾಮ ಶಾಲೆಯ ಶಿಕ್ಷಕಿ ಶಶಿಕಲಾ ಅಳದಂಗಡಿ, ಜೊತೆ ಕಾರ್ಯದರ್ಶಿಯಾಗಿ ಅಶ್ವಿನಿ ಪಿಲ್ಯ ಮತ್ತು ಕೋಶಾಧಿಕಾರಿಯಾಗಿ ಜಯಪ್ರಕಾಶ್ ದೇವಾಡಿಗ ಗೋಳಿಕಟ್ಟೆ ಆಯ್ಕೆಯಾದರು.
ಜ.17ರಂದು ಯಕ್ಷಗಾನ ತರಗತಿ ವಿದ್ಯಾರ್ಥಿಗಳ ಪ್ರಥಮ ರಂಗಪ್ರವೇಶ ನಡೆಯಲಿದ್ದು ಈ ಬಗ್ಗೆ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಇನ್ನಿತರ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ವಿವಿಧ ಕಡೆ ನಡೆದ ಪ್ರತಿಭಾ ಕಾರಂಜಿಯಲ್ಲಿ ವಿಜೇತರಾದ ಯಕ್ಷಗಾನ ಕೇಂದ್ರದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಟ್ರಸ್ಟಿ ಅರುಣ್ ಜೈನ್ ಧನ್ಯವಾದ ಸಲ್ಲಿಸಿದರು.

