ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ರೆಡ್ ರಿಬ್ಬನ್ ಕ್ಲಬ್ ವತಿಯಿಂದ ವಿಶ್ವ ಏಡ್ಸ್ ದಿನದ ಪ್ರಯುಕ್ತ ಎಚ್.ಐ.ವಿ ಏಡ್ಸ್ ಮಾಹಿತಿ ಕಾರ್ಯಕ್ರಮವು ಡಿ. 1ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಮಡಂತ್ಯಾರು ಶ್ರೇಯ ಕ್ಲಿನಿಕ್ ಡಾಕ್ಟರ್ ಜೆಆರ್ ಸೇರಾ ಅವರು ಎಚ್ಐವಿ ಏಡ್ಸ್ ರೋಗಗಳು ಹರಡುವ ವಿಧಾನ ಮತ್ತು ಅದನ್ನು ತಡೆಗಟ್ಟುವಲ್ಲಿ ಅನುಸರಿಸಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಉಪಯುಕ್ತ ಮಾಹಿತಿ ನೀಡಿ ವಿದ್ಯಾರ್ಥಿಗಳು ಸ್ವಸ್ಥ ಮತ್ತು ಆರೋಗ್ಯವಂತರಾಗುವಂತೆ ಕರೆ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಅಲೆಕ್ಸ್ ಐವನ್ ಸಿಕ್ವೇರಾ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾನಾಧಿಕಾರಿಗಳಾದ ಪ್ರೊಫೆಸರ್ ಪ್ರಕಾಶ್ ಕ್ರಮಧಾರಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿಗಳಾದ ಪ್ರಶಾಂತ್ ಎಂ. ಹಾಗೂ ದಿವ್ಯ ಉಪಸ್ಥಿತರಿದ್ದರು. ಯೋಜನಾಧಿಕಾರಿ ಪ್ರಶಾಂತ್ ಎಂ. ಸ್ವಾಗತಿಸಿ, ರೆಜ್ವಿಟಾ ದ್ವಿತೀಯ ಬಿಕಾಂ ಅವರು ನಿರೂಪಿಸಿದರು. ಶ್ರೇಯ ದ್ವಿತೀಯ ಬಿಕಾಂ ವಂದಿಸಿದರು.

