






ಮಡಂತ್ಯಾರು: ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ ನ. 29ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯರಾದ ಅದ್ವಿತ ಶೆಟ್ಟಿ ಮತ್ತು ಅಲೀನಾ ಅನಿಶ್ ರವರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಹಾಗೂ 7ನೇ ತರಗತಿಯ ವಿದ್ಯಾರ್ಥಿನಿಯಾದ ಆರಾಧ್ಯ ರವರು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಅವರಿಗೆ ಶಾಲಾ ಶಿಕ್ಷಕ ವೃಂದದವರು ತರಬೇತಿಯನ್ನು ನೀಡಿರುತ್ತಾರೆ.









