Site icon Suddi Belthangady

ವಿಶ್ವ ಏಡ್ಸ್ ದಿನ: ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನಲ್ಲಿ ಜಾಗೃತಿ ಉಪನ್ಯಾಸ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಎಸ್ ಡಿ ಎಮ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಎನ್.ಎಸ್.ಎಸ್ ಘಟಕದ ಸಹಯೋಗದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಜಾಗೃತಿ ಉಪನ್ಯಾಸ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಮತ್ತು ವೈದ್ಯಕೀಯ ಅಧೀಕ್ಷಕಿ ಡಾ. ಪ್ರಕೃತಿ ಎಚ್ಐವಿ ಸೋಂಕಿನ ಲಕ್ಷಣಗಳು, ತಡೆಗಟ್ಟುವ ಕ್ರಮಗಳು, ಸುರಕ್ಷಾ ಕ್ರಮಗಳು, ಸೋಂಕಿನ ತಡೆಗಟ್ಟುವಿಕೆಗೆ ಸರಕಾರದ ಯೋಜನೆಗಳು ಮುಂತಾದ ವಿಷಯದ ಬಗ್ಗೆ ಜಾಗೃತಿ ಮತ್ತು ಅರಿವು ಮೂಡಿಸುವ ಬಗ್ಗೆ ಉಪನ್ಯಾಸ ನೀಡಿದರು. ಕಾಲೇಜಿನ ಉಪಪ್ರಾಂಶುಪಾಲ ರಾಜೇಶ್ ಬಿ. ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ವಿಶ್ವನಾಥ್ ಎಸ್., ಸಹಯೋಜನಾಧಿಕಾರಿ ಶೋಭಾ ಪಿ., ಎನ್.ಎಸ್.ಎಸ್ ನಾಯಕ ಸಂಕೇತ್, ನಾಯಕಿ ರಾಶಿಕ ಉಪಸ್ಥಿತರಿದ್ದರು.
ಸ್ವಯಂ ಸೇವಕಿ ಸುಪೇಕ್ಷಾ ಸ್ವಾಗತಿಸಿ, ಧನ್ಯ ಕಾರ್ಯಕ್ರಮ ನಿರೂಪಿಸಿದರು. ಪಲ್ಲವಿ ವಂದಿಸಿದರು.

Exit mobile version