Site icon Suddi Belthangady

ಬೆಳ್ತಂಗಡಿ: ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

ಬೆಳ್ತಂಗಡಿ: 2025-2026ನೇ ಸಾಲಿಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ತಾಲೂಕಿನ ವಿವಿಧ ಗ್ರಾಮಗಳ ವ್ಯಾಪ್ತಿಗಳಲ್ಲಿ ನಿರಂತರವಾಗಿ ಸುರಿದ ಬೀಕರ ಮಳೆಯಿಂದಾಗಿ ಪ್ರವಾಹ ಸ್ಥಿತಿ ಏರ್ಪಟ್ಟಿದ್ದು ಸಾರ್ವಜನಿಕ ಸಂಪರ್ಕ ರಸ್ತೆಗಳು, ಸೇತುವೆಗಳು, ಕಾಲು ಸಂಕಗಳು, ವಿದ್ಯುತ್ ಸಂಪರ್ಕಗಳು, ಶಾಲಾ ಕಟ್ಟಡಗಳು, ಅಂಗನವಾಡಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡಗಳು ಮತ್ತು ಜಮೀನುಗಳು ತೀರಾ ಅಪಾಯದ ಮಟ್ಟದಲ್ಲಿದ್ದು, ನೀರಿನ ಸೆಳೆತಕ್ಕೆ ಕೊಚ್ಚಿ/ಕುಸಿತಕ್ಕೊಳಗಾಗುವ ಸಾಧ್ಯತೆ ಇರುವುದರಿಂದ ಆ ಭಾಗದಲ್ಲಿ ಅಗತ್ಯವಾಗಿ ತಡೆಗೋಡೆ ಕಾಮಗಾರಿಗಳನ್ನು ಕೈಗೊಳ್ಳಲು ಹಾಗೂ ಸೇತುವೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಶಾಸಕರು 31.07.2025ರಂದು ಸರಕಾರದ ಕಂದಾಯ ಇಲಾಖೆಯ ಕಾರ್ಯದರ್ಶಿಗಳಿಗೆ ಮನವಿಯನ್ನು ನೀಡಿದ್ದು ಸದ್ರಿ ಮನವಿಗೆ ಸ್ಪಂದಿಸಿದ ರಾಜ್ಯ ಸರಕಾರ ರೂ.10.67 ಕೋಟಿ ಅನುದಾನವನ್ನು ಮಂಜೂರುಗೊಳಿಸಿರುತ್ತದೆ.

ಅನುದಾನವನ್ನು ಮಂಜೂರುಗೊಳಿಸಿದ ರಾಜ್ಯ ಸರಕಾರಕ್ಕೆ ಶಾಸಕ ಹರೀಶ್ ಪೂಂಜರವರು ತಾಲೂಕಿನ ಜನತೆಯ ಪರವಾಗಿ ಧನ್ಯವಾದ ತಿಳಿಸಿದ್ದಾರೆ.

Exit mobile version