ನಾಳ: ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ನ.29ರಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಗ್ರಾಮ ಪಂಚಾಯತ್ ಸದಸ್ಯರಾದ ವಿಜಯ್ ಕುಮಾರ್, ಸುಧಾಕರ್ ಮಜಲ್, ಲತೀಫ್ ಪರಿಮ, ಪುಷ್ಪ, ನಾಳ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕೇಶವ ಪೂಜಾರಿ, ಕಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಜನಾರ್ಧನ ಗೌಡ, ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕಿ ರೀತಾ, ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಮಮತಾ ಆಳ್ವ, ದಿವ್ಯ ಪೂಜಾರಿ, ಬದ್ರುನ್ನಿಸಾ, ಉಮೇಶ್ ಗೌಡ ನಾಳ, ಸೋಮಪ್ಪ ಗೌಡ ಕುಬಯ, ಸುಭಾಷ್ ಗಾಣಿಗ ಹಾಗೂ ಮಕ್ಕಳ ಪೋಷಕರು, ಸ್ತ್ರೀಶಕ್ತಿ ಸಂಘದ ಪದಾಧಿಕಾರಿಗಳು ಹಾಜರಿದ್ದು ಮಕ್ಕಳಿಗೆ ಶುಭ ಹಾರೈಸಿದರು. ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿ ಹಾಜರಿದ್ದು ಕಾರ್ಯಕ್ರಮಕ್ಕೆ ಸಹಕಾರ ನೀಡಿದರು.
ನಾಳ: ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

