




ಧರ್ಮಸ್ಥಳ: ಎಂ.ಆರ್.ಪಿ.ಎಲ್. ನ ಸಿ.ಎಸ್.ಆರ್ ಅನುದಾನದಲ್ಲಿ ಸೇವಾ ಭಾರತಿಯ ನೂತನ ಕಾರ್ಯಾಲಯ ‘ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ ಧರ್ಮಸ್ಥಳ ಕನ್ಯಾಡಿಯ ಸೇವಾನಿಕೇತನದಲ್ಲಿ ಡಿ.4ರಂದು ಜರಗಿತು.



ನೂತನ ಕಾರ್ಯಾಲಯವನ್ನು ಸೇವಾ ಭಾರತಿಯ ಅಧ್ಯಕ್ಷೆ ಸ್ವರ್ಣಗೌರಿ ಅಧ್ಯಕ್ಷತೆಯಲ್ಲಿ ಆರ್.ಎಸ್.ಎಸ್. ಸಹ ಸರಕಾರ್ಯವಾಹ ಮುಕುಂದ್ ಸಿ.ಆರ್. ಉದ್ಘಾಟಿಸಿದರು. ಆರ್.ಎಸ್.ಎಸ್.ನ ಪ್ರಾಂತ ಸಂಯೋಜಕ ಸುಬ್ರಾಯ ನಂದೋಡಿ ವಾರ್ಷಿಕ ವರದಿ ಮಂಡಿಸಿದರು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಪೋಸ್ಟರ್ ಬಿಡುಗಡೆಗೊಳಿಸಿದರು.




ಶಾಸಕ ಹರೀಶ್ ಪೂಂಜ, ಧರ್ಮಸ್ಥಳ ಗ್ರಾಪಂ ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಕೆ. ಕೃಷ್ಣ ಭಟ್, ಮುಂಬೈಯ ಕ್ಯಾಪ್ರಿಕಾರ್ನ್ ಅಗ್ರಿಫಾರ್ಮರ್ಸ್ ಡೆವಲಪರ್ಸ್ನ ಚೀಫ್ ಅಕೌಂಟೆಂಟ್ ಕೆ. ವಿಷ್ಣುಮೂರ್ತಿ ರಾವ್, ಸೇವಾಧಾಮದ ಸಂಚಾಲಕ ಕೆ.ಪುರಂದರ ರಾವ್, ಕನ್ಯಾಡಿ ಶ್ರೀ ದುರ್ಗಾ ಮಾತೃ ಮಂಡಳಿಯ ಅಧ್ಯಕ್ಷೆ ಮಮತಾ, ಸೇವಾಭಾರತಿ ಆರೋಗ್ಯ ಯೋಜನೆಯ ಸಂಚಾಲಕ ಅಖಿಲೇಶ್ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಈವರೆಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರಿಗೆ ಸೇವಾನಿಕೇತನ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸಿದ ಸಿಬ್ಬಂದಿಗಳಿಗೆ, ಎರಡು ವರ್ಷಗಳಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಆನ್ಲೈನ್ನಲ್ಲಿ ಭಗವದ್ಗೀತೆ ಅಭ್ಯಾಸ ಮಾಡಿಸಿದ ಗುರುಗಳಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಬೆನ್ನುಹುರಿ ಅಪಘಾತ ಮತ್ತು ನಿರ್ವಹಣೆ ಜಾಗೃತಿಗಾಗಿ ತಯಾರಿಸಿದ ಪೋಸ್ಟರ್ ಬಿಡುಗಡೆ ಮಾಡಲಾಯಿತು.









