Site icon Suddi Belthangady

ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಶೇಷ ಪೂಜೆ

ಕಲ್ಮಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.4ರಂದು ಧರ್ಮಸ್ಥಳ ತಲುಪಿದೆ.

ಧರ್ಮಸ್ಥಳ ಅಣ್ಣಪ್ಪ ಬೆಟ್ಟದಲ್ಲಿ ಕ್ಷೇತ್ರದ ಅರ್ಚಕರು ವಿಷೇಶ ಪೂಜೆ ಸಲ್ಲಿಸಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಕೆ.ಪಿ.ಸಿ.ಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ಕಾಂಗ್ರೇಸ್ ಸಮಿತಿಯ ಅಧ್ಯಕ್ಷ ನಾಗೇಶ್ ಗೌಡ, ವೀರೂ ಶೆಟ್ಟಿ ಧರ್ಮಸ್ಥಳ, ಸೀತಾರಾಮ್ ತೋಲ್ಪಡೀತಾಯ, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ, ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಸುನೀಲ್ ಕನ್ಯಾಡಿ, ತುಕಾರಾಮ್ ಸಾಲಿಯಾನ್, ರವಿ ಭಟ್ ಕಲ್ಮಂಜ, ಶಶಿಧರ್ ಕಲ್ಮಂಜ ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು. ವಿವಿಧ ಭಜನಾ ತಂಡಗಳ ಮೂಲಕ ಮೆರವಣಿಗೆ ಸಾಗಿತು.

Exit mobile version