Site icon Suddi Belthangady

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಿ.4ರಂದು ಪ್ರೌಢಶಾಲಾ ಬಾಲಕಿಯರಿಗೆ “ಬ್ಲೂಮಿಂಗ್ ಇಂಟು ಟೀನ್ಸ್ (Blooming into Teens)” ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರಿನ ಇಕೋ ಹಬ್ ನ ಸ್ಥಾಪಕರು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೈಶಾಖ ಕುಲಕರ್ಣಿ ಇವರು ಪ್ರೌಢಾವಸ್ಥೆಯಲ್ಲಿ ಬಾಲಕಿಯರು ತಿಳಿದಿರಬೇಕಾದ ಮಾನಸಿಕ, ಭಾವನಾತ್ಮಕ, ದೈಹಿಕ ಹಾಗೂ ಆಹಾರ ಪದ್ಧತಿಯ ವಿಷಯದ ಕುರಿತಾಗಿ ಮಾಹಿತಿ ಹಂಚಿಕೊಂಡರು.

ಉಜಿರೆ ಎಸ್.ಡಿ.ಎಮ್ ಐ.ಟಿ ಕಾಲೇಜಿನ ಮುಖ್ಯ ಗ್ರಂಥಪಾಲಕ ಡಾ. ರಜತಾ ಪಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕಿ ಸವಿತಾ ವೇದಪ್ರಕಾಶ್ ನಿರೂಪಿಸಿ, ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ. ಸ್ವಾಗತಿಸಿದರು.

Exit mobile version