ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ. 4ರಂದು ವಾರ್ಷಿಕ ಕ್ರೀಡಾಕೂಟವನ್ನು ಆಯೋಜಿಸಲಾಯಿತು. ಕ್ರೀಡಾಕೂಟವನ್ನು ಉಜಿರೆಯ ರತ್ನಮಾನಸದ ಸಹಪಾಲಕ ರವಿಚಂದ್ರ ಬಿ. ಅವರು ದೀಪ ಪ್ರಜ್ವಲನ ಮಾಡುವುದರ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡರವರು ವಹಿಸಿಕೊಂಡಿದ್ದರು. ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ರವಿಚಂದ್ರ ಬಿ. ಅವರು ಶಾಲಾ ಹಂತದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಎಲ್ಲರೂ ಸಕ್ರಿಯವಾಗಿ ತನ್ನನ್ನು ತಾನು ತೊಗಡಿಸಿಕೊಂಡು ಕ್ರೀಡಾಸ್ಪೂರ್ತಿಯನ್ನು ಮೆರೆಯಬೇಕು, ಕ್ರೀಡೆಯಲ್ಲಿ ಸೋಲು ಗೆಲುವು ಎನ್ನುವುದು ಮುಖ್ಯವಲ್ಲ ಭಾಗವಹಿಸುವಿಕೆಯ ಮುಖ್ಯ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶೀನಪ್ಪ ಗೌಡರವರು ವಿದ್ಯಾರ್ಥಿಗಳ ಶರೀರಿಕ ಬೆಳವಣಿಗೆಗೆ ಕ್ರೀಡೆ ಅತ್ಯಂತ ಮಹತ್ವ ಎಂದು ತಿಳಿಸಿದರು. ಕ್ರೀಡಾ ಪ್ರತಿಜ್ಞೆಯನ್ನು ಶಾಲಾ ವಿದ್ಯಾರ್ಥಿನಿ ಶಬ್ ನಮ್ ಬೋಧಿಸಿದಳು.
ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿ ಯಶೋಧ ಅವರು ಸ್ವಾಗತಿಸಿ, ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಶೀಲಾ ನಿರೂಪಿಸಿದರು. ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು. ಶಾಲಾ ಹಿರಿಯ ಶಿಕ್ಷಕಿ ತೇಜಾವತಿಯವರು ಧನ್ಯವಾದಗೈದರು.

