ಬೆಳ್ತಂಗಡಿ: ಈ ಹಿಂದೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಆದೇಶವಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಹೈಕೋರ್ಟ್ ನಿರ್ದೇಶನದಂತೆ ಪುತ್ತೂರು ಎಸಿಯವರು ಮತ್ತೆ ಗಡಿಪಾರು ನೋಟೀಸ್ ಜಾರಿ ಮಾಡಿದ್ದಾರೆ.
ಸೌಜನ್ಯ ಪರ ಹೋರಾಟಗಾರರಾಗಿ ಗುರುತಿಸಿಕೊಂಡಿರುವ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ದ.ಕ. ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಅವರು ಈ ಹಿಂದೆ ಆದೇಶ ಮಾಡಿದ್ದರು.
ಇದರ ವಿರುದ್ಧ ಮಹೇಶ್ ಶೆಟ್ಟಿಯವರು ಹೈಕೋರ್ಟ್ ಮೊರೆ ಹೋಗಿದ್ದರು.ಎಸಿಯವರ ಆದೇಶಕ್ಕೆ ಮಧ್ಯಂತರ ತಡೆ ನೀಡಿದ್ದ ಹೈಕೋರ್ಟ್, ಸೆಕ್ಷನ್ ಸರಿಪಡಿಸಿ ಹೊಸದಾಗಿ ನೋಟಿಸ್ ಜಾರಿ ಮಾಡುವಂತೆ ಎಸಿಯವರಿಗೆ ನಿರ್ದೇಶನ ನೀಡಿತ್ತು. ಅದರಂತೆ ಇದೀಗ ಎಸಿಯವರು ಮಹೇಶ್ ಶೆಟ್ಟಿ ತಿಮರೋಡಿಗೆ ನೋಟೀಸ್ ಜಾರಿ ಮಾಡಿದ್ದು, ಡಿ.8ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

