ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ “ಜನರ ಬಳಿಗೆ ತಾಲೂಕು ಆಡಳಿತ” ಬಾರ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನ ಕಾರ್ಯಕ್ರಮವು ಡಿ.6 ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಪ್ರಾರಂಭದಲ್ಲೇ ಪಂ. ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಶಿಸ್ತುಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
18ನೇ ಜನಸ್ಪಂದನ ಸಭೆ ಬಾರ್ಯ ಗ್ರಾಮ ಪಂಚಾಯತ್ ನಲ್ಲಿ ಆಯೋಜಿಸಲಾಗಿತ್ತು, ಆದರೆ ಸಭೆಗೆ ಧ್ವನಿವರ್ಧಕ ಹಾಗೂ ಸಭಾಂಗಣ ವ್ಯವಸ್ಥೆಯನ್ನು ಮಾಡದಿರುವುದಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಶಾಸಕ ಹರೀಶ್ ಪೂಂಜರು ಗರಂ ಆದರು. ಜವಾಬ್ದಾರಿಯನ್ನು ನಿಭಾಯಿಸದ ಪಿಡಿಒಗೆ ನೋಟಿಸ್ ಜಾರಿಗೊಳಿಸುವಂತೆ ತಾಲೂಕು ಪಂಚಾಯತ್ ಇಓ ಭವಾನಿಶಂಕರ್ ಅವರಿಗೆ ಸೂಚಿಸಿದರು.
ಸಭೆಯಲ್ಲಿ ಪಂಚಾಯತ್ ಅಧ್ಯಕ್ಷ ಪಿ.ಕೆ ಉಸ್ಮಾನ್, ತಹಶೀಲ್ದಾರ್ ಪೃಥ್ವಿ ಸಾನಿಕಂ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಸ್ವಾಗತಿಸಿ, ಧನ್ಯವಾದವಿತ್ತರು.

